ಪತ್ರಕರ್ತ ಅರ್ನಾಬ್ ಗೋಸ್ವಾಮಿ ಬಂಧನ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

79056198
Published on

ಹಾಸನ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಬಂಧನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಾಕ್ ಸ್ವಾತಂತ್ರೃಕ್ಕೆ ಧಕ್ಕೆ ತಂದಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಕ್ರಮ ಜರುಗಿಸಬೇಕು. ರಾಷ್ಟ್ರೀಯ ಹಿತಾಸಕ್ತಿ ನಿಟ್ಟಿನಲ್ಲಿ ಸುದ್ದಿ ಪ್ರಸಾರ ಮಾಡುವ ಮೂಲಕ ಸನಾತನ ಧರ್ಮ ರಕ್ಷಣೆಯಲ್ಲಿ ಅರ್ನಾಬ್ ಗೋಸ್ವಾಮಿ ಪಾತ್ರ ದೊಡ್ಡದಿದೆ. ಈ ಬಂಧನ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ ಎಂದರು.

ಕಾನೂನು ಬಾಹಿರವಾಗಿ ನ್ಯಾಯಯುತ ಪತ್ರಕರ್ತನನ್ನು ಬಂಧಿಸಲಾಗಿದೆ. ಪತ್ರಿಕಾ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಳು ಮಾಡುವ ಕೆಲಸ ರಾಷ್ಟ್ರದಲ್ಲಿ ನಡೆಯುತ್ತಿದೆ. ಅರ್ನಾಬ್ ಗೋಸ್ವಾಮಿ ಪಾಲಘರ್‌ನಲ್ಲಿ ಸಾಧುಗಳ ಹತ್ಯೆ ನಡೆದಿರುವ ಬಗ್ಗೆ ಮತ್ತು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅನೇಕ ಕಾನೂನು ಬಾಹಿರ ಕೃತ್ಯಗಳ ಕುರಿತಾಗಿ ಸುದ್ದಿ ಮಾಡಿದ್ದರು. ಈ ಎಲ್ಲ ಘಟನೆಗಳನ್ನು ವರದಿ ಮಾಡಿರುವುದು ಮಹಾರಾಷ್ಟ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net