ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಹಿರಿಯ ವೈದ್ಯರು

19 smg 4
Published on

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಕೆಲ ಹಿರಿಯ ವೈದ್ಯರು ಕೆಲಸಕ್ಕೆ ಸರಿಯಾಗಿ ಹಾಜರಾಗದೇ ರೋಗಿಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಪದಾಧಿಕಾರಿಗಳು ಶನಿವಾರ ಸಿಮ್್ಸ ನಿರ್ದೇಶಕ ಡಾ. ಒ.ಎಸ್.ಸಿದ್ದಪ್ಪ ಅವರಿಗೆ ಮನವಿ ಸಲ್ಲಿಸಿದರು.

ಹಿರಿಯ ವೈದ್ಯರು ಕೆಲಸಕ್ಕೆ ಬಾರದೇ ಸಮಸ್ಯೆಯಾಗಿದ್ದು, ಜೂನಿಯರ್ ವೈದ್ಯರು ರೋಗಿಗಳ ತಪಾಸಣೆ ಮಾಡಿ ಅದನ್ನು ಸೀನಿಯರ್ ವೈದ್ಯರಿಗೆ ವರದಿ ಮಾಡುತ್ತಾರೆ. ನಂತರ ಚಿಕಿತ್ಸೆ ಕೊಡುವುದರಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಕೆಲವು ಸಂದರ್ಭದಲ್ಲಿ ರೋಗಿಯ ಸಾವಿಗೆ ಕಾರಣವಾಗಿರುತ್ತಾರೆ ಎಂದು ದೂರಿದರು.

ಸರ್ಕಾರಿ ವೈದ್ಯರು ಸೇವಾ ಅವಧಿಯಲ್ಲಿ ಹಾಗೂ ಬಿಡುವಿನ ವೇಳೆಯಲ್ಲಿ ಖಾಸಗಿ ಆಸ್ಪತ್ರೆ ಕ್ಲಿನಿಕ್​ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ತೊಂದರೆಯಾಗಿದೆ. ಇನ್ಮುಂದೆ ಸೀನಿಯರ್ ವೈದ್ಯರು ಸಮಯಕ್ಕೆ ಸರಿಯಾಗಿ ಬಂದು ನಿಗದಿತ ಸಮಯದಲ್ಲಿ ರೋಗಿಗಳ ಪರೀಕ್ಷಿಸಿ ಚಿಕಿತ್ಸೆ ನೀಡಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ವಿ.ಭಗವಾನ್ ಸೇರಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net