

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಸಬಾ ಹೋಬಳಿಯ ಮಣ್ಣಾಯಕನಹಳ್ಳಿ, ಗೊಲ್ಲರಹಳ್ಳಿ ,ತಿಮ್ಮಪ್ಪನಹಳ್ಳಿ, ಕೆರೆ ಏರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಸುತ್ತಮುತ್ತಲಿನ ಕೆರೆ ಏರಿಗಳಲ್ಲಿ ಬೆಳೆದ ಗಿಡಗಂಟಿಗಳನ್ನು ಶೀಘ್ರ ತೆರವುಗೊಳಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕರು ಬುಧವಾರ ಅರಸೀಕೆರೆ ತಾಪಂ ಇಒಗೆ ಮನವಿ ಸಲ್ಲಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಕಾಡುಪ್ರಾಣಿಗಳ ಉಪಟಳವನ್ನು ತಪ್ಪಿಸಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದರು.