

ಪಡುಬಿದ್ರಿ: ಹೆಜಮಾಡಿ ಮೀನುಗಾರಿಕಾ ಬಂದರು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೀನುಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರಿಗೆ ಮನವಿ ಸಲ್ಲಿಸಿದರು.
ಕಾಪು ತಾಲೂಕಿನ ಹೆಜಮಾಡಿ ಬಂದರಿಗೆ 2021-22ನೇ ಸಾಲಿನಲ್ಲಿ 180 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಮತ್ತು ಸುತ್ತಮುತ್ತಲಿನ ಮೀನುಗಾರರಿಗೆ ತೊಂದರೆಯಾಗುತ್ತಿದೆ. ಮೀನುಗಾರಿಕಾ ದೋಣಿ ತಂಗುದಾಣಕ್ಕೆ ಸಮಸ್ಯೆಯಾಗುತ್ತಿದ್ದು, ತಕ್ಷಣ ಹೆಚ್ಚುವರಿ ಹಣ ಬಿಡುಗಡೆ ಮಾಡಿ ಹೆಜಮಾಡಿ ಬಂದರಿನ ಕಾಮಗಾರಿ ಕೈಗೊಳ್ಳುವಂತೆ ಶಾಸಕರು ಅಜಯ್ ನಾಗಭೂಷಣ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಕೂಡಲೇ ಕಾಮಗಾರಿಗೆ ಕೈಗೊಳ್ಳುವ ಬಗ್ಗೆ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.