ತೆರಿಗೆ ಪಾವತಿಯಿಂದ ವಿನಾಯಿತಿಗೆ ಮನವಿ

mla manavi
Published on

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವ ಸೆ.೨೩ ರಿಂದ ಅ.೨ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ದಸರಾ ಅಂಗವಾಗಿ ಹೊರ ರಾಜ್ಯಗಳಿಂದ ನೂರಾರು ಸಂಖ್ಯೆಯಲ್ಲಿ ವಾಹನಗಳೊಂದಿಗೆ ಸಾವಿರಾರು ಪ್ರವಾಸಿಗರು ಆಗಮಿಸಲಿದ್ದು, ಆದ್ದರಿಂದ ಸಾರ್ವಜನಿಕ ಹಿತದೃಷ್ಠಿಯಿಂದ ಕರ್ನಾಟಕ ಮೋಟರ್ ವಾಹನ ತೆರಿಗೆ ಅಧಿನಿಯಮ ೧೯೫೭ರ ಕಲಂ ೧೬(೧) ರಡಿಯಲ್ಲಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಬೇಕಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ವರ್ತಕರ ಹಿತ ರಕ್ಷಣಾ ಸಮಿತಿ ವತಿಯಿಂದ ನಿಸರ್ಗಧಾಮ ಟೂರಿಸ್ಟ್ ಸೆಂಟರ್‌ನಲ್ಲಿ ಶನಿವಾರ ಮನವಿ ಸಲ್ಲಿಸಿದರು.

ಮೈಸೂರು, ಕೊಡಗು ಹೊರ ರಾಜ್ಯಗಳ ಗಡಿ ಪ್ರದೇಶಗಳಾದ ಕಾರಣ ಹೊರ ರಾಜ್ಯದ ಪ್ರವಾಸಿಗರಿಗೆ ದಸರಾ ಮಹೋತ್ಸವಕ್ಕೆ ಬರಲು ಅನುಕೂಲವಾಗುತ್ತದೆ. ಇದರಿಂದ ಕೊಡಗಿನ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಹಾಗೂ ಪ್ರವಾಸೋದ್ಯಮ ವ್ಯಾಪಾರದಲ್ಲಿ ತೊಡಗಿಕೊಂಡಿರುವ ವ್ಯಾಪಾರಿಗಳಿಗೆ ಆರ್ಥಿಕವಾಗಿ ಸಹಾಯವಾಗುತ್ತದೆ. ಆದ್ದರಿಂದ ತಾವುಗಳು ಈ ಬಗ್ಗೆ ಗಮನ ಹರಿಸಿ ಸಹಾಯ ಸಹಕಾರ, ನೀಡಬೇಕೆಂದು ಪ್ರವಾಸಿತಾಣವಾದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ವರ್ತಕರ ನಿಯೋಗವು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಮನವಿ ಮಾಡಿದರು.

ವರ್ತಕರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ ಅವರು ಕೂಡಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸಭೆ ಕರೆಯಲಾಗುವುದೆಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಿಯೋಗದಲ್ಲಿ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ವರ್ತಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮೈಸಿ ಕತ್ತಣಿರ, ಉಪಾಧ್ಯಕ್ಷ ಮುರುಳಿ, ಹಿರಿಯ ಸಲಹೆಗಾರರಾದ ಲೋಕೇಶ್, ಸಮಿತಿಯ ಸದಸ್ಯರಾದ ಜಾನ್, ಪರಮೇಶ್, ನಾಸಿರ್, ಶಮೀರ್, ವಸೀಮ್, ಶಾಫಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net