ಎಆರ್‌ಟಿಒ ಕಚೇರಿಯಲ್ಲಿನ ಖಾಲಿ ಹುದ್ದೆ ಭರ್ತಿಗೆ ಮನವಿ

IMG-20250511-WA0108
ಸಕಲೇಶಪುರ ಎಆರ್‌ಟಿಒ ಕಚೇರಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
Published on

ಸಕಲೇಶಪುರ: ಎಆರ್‌ಟಿಒ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶನಿವಾರ ಭೇಟಿ ಮಾಡಿ ಚರ್ಚಿಸಿದ ಶಾಸಕ ಸಿಮೆಂಟ್ ಮಂಜು, ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಆರ್‌ಟಿಒ ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಕಚೇರಿಯ ಕಾರ್ಯ ಚಟುವಟಿಕೆ ನಡೆಸುವುದು ಕಷ್ಟವಾಗುತ್ತಿದೆ. ಪ್ರಥಮ ದರ್ಜೆ ಸಹಾಯಕರ ಹುದ್ದೆ 2, ದ್ವಿತೀಯ ದರ್ಜೆ ಸಹಾಯಕರ ಹುದ್ದೆ 3, ಕ್ಲರ್ಕ್ 2, ವಾಹನ ಚಾಲಕ 1 ಹುದ್ದೆ ಇರುತ್ತದೆ. ಆದರೆ ಸರ್ಕಾರವು ಈವರೆಗೆ ಮಂಜೂರಾದ ಹುದ್ದೆಗಳಲ್ಲಿ ಕೆಲವೇ ಹುದ್ದೆಗಳನ್ನು ಭರ್ತಿ ಮಾಡಿ ಸ್ಥಳ ನಿಯುಕ್ತಿ ಮಾಡಿ ಆದೇಶ ಹೊರಡಿಸಿದೆ. ಅದರಲ್ಲಿಗ ಹಾಲಿ ಭರ್ತಿಯಾಗಿರುವ ಕೆಲವೇ ಸಿಬ್ಬಂದಿಯೂ ವರ್ಗಾವಣೆ, ವೈಯಕ್ತಿಕ ಕೋರಿಕೆಯ ಮೇರೆಗೆ ಸರ್ಕಾರದ ಹಂತದಲ್ಲಿ ನಿಯೋಜನೆಗೊಂಡು ಬೇರೆಡೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಎಆರ್‌ಟಿಒ ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಕಚೇರಿಯ ಕಾರ್ಯಚಟುವಟಿಕೆ ಕಷ್ಟವಾಗುತ್ತಿದೆ ಎಂದು ತಿಳಿಸಿದರು.

ಕೂಡಲೇ ಹಾಸನ ಜಿಲ್ಲೆಯ ಸಕಲೇಶಪುರ ಎಆರ್‌ಟಿಒ ಇಲಾಖೆಯ ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಸರಿದೂಗಿಸಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net