ಪೂರ್ಣ ಪ್ರಮಾಣದಲ್ಲಿ ಹುದ್ದೆ ಭರ್ತಿಗೆ ಮನವಿ

h10-priyanaga m
Published on

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಚಾಲಕ/ನಿರ್ವಾಹಕ ಹುದ್ದೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ ನೂರಾರು ಉದ್ಯೋಗಾಕಾಂಕ್ಷಿಗಳು ಇಲ್ಲಿಯ ವಾಕರಸಾ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಮೂಲ ಉಲ್ಲೇಖದ ಪ್ರಕಾರ 2814 ಹುದ್ದೆಗಳನ್ನು ಭರ್ತಿ ಮಾಡಬೇಕು. ಸಾವಿರ ಹುದ್ದೆಗಳಿಗೆ ಹೊಸ ಆದೇಶ ಮಾಡದೇ ಈಗ ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಚಾಲಕ ಕಮ್ ನಿರ್ವಾಹಕ ಹುದ್ದೆಗೆ ಪರಿಗಣಿಸಬೇಕು. ನಿರ್ವಾಹಕ ಲೈಸೆನ್ಸ್ ಇರುವ ಅಭ್ಯರ್ಥಿಯನ್ನೇ ಹುದ್ದೆಗೆ ಪರಿಗಣಿಸಬೇಕು. ಹಲವು ಚಾಲನಾ ಅಭ್ಯರ್ಥಿಗಳಲ್ಲಿ ಕೇವಲ ಡ್ರೈವಿಂಗ್ ಲೈಸೆನ್ಸ್ ಇದ್ದು, ಕಂಡಕ್ಟರ್ ಲೈಸೆನ್ಸ್ ಇಲ್ಲದೇ ಇರುವುದರಿಂದ ಚಾಲಕ ಕಮ್ ನಿರ್ವಾಹಕ ಹುದ್ದೆಗೆ ಪರಿಗಣಿಸಿ ನಿರ್ವಾಹಕ ಲೈಸೆನ್ಸ್ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕು. ಯಾವುದೇ ಕಾರಣಕ್ಕೂ 2814 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳದೇ ಹೊಸ ಅಧಿಸೂಚನೆ ಹೊರಡಿಸಬಾರದು. ಒಂದು ವೇಳೆ ಮಾಡಿಕೊಂಡಿದ್ದೇ ಆದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಮನವಿ ಸ್ವೀಕರಿಸಿದ ಪ್ರಿಯಾಂಗಾ ಎಂ., ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಹಂಪಿ ಕನ್ನಡ ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಸುಭಾಷಸಿಂಗ್ ಜಮಾದಾರ, ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ, ಪ್ರಮುಖರಾದ ಮಂಜುನಾಥ ಮಾಲಶೆಟ್ಟಿ, ಖಲಂದರ್ ಹುಬ್ಬಳ್ಳಿ, ಮಾಲತೇಶ ಜಿ.ಎನ್. ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net