

ಹನಗೋಡು: ಕಳೆದ 20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಕಾಯಂಗೊಳಿಸುವಂತೆ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಗಜ ಪಯಣಕ್ಕೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ್ದಾಗ ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 20 ವರ್ಷಗಳಿಂದ ಎನ್‌ಆರ್‌ಎಚ್‌ಎಂ ಒಳಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳು ಮತ್ತು ಕ್ಲಿನಿಕಲ್ ಸಿಬ್ಬಂದಿ ಸೇವೆಯನ್ನು ಪರಿಗಣಿಸಿ ಕಾಯಂಗೊಳಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು.
ಹುಣಸೂರು ಕಾಂಗ್ರೆಸ್ ಕಾರ್ಯಾಧ್ಯಕ್ಷ ವಕೀಲ ಪುಟ್ಟರಾಜು, ನಸಿರ್ಂಗ್ ಅಧಿಕಾರಿ ಬೃಂದಾ, ಡಾ.ಹರ್ಷ, ಡಾ.ಪರಮೇಶ್, ಡಾ.ಮಂಜುನಾಥ್, ವಿಶಾಲಾಕ್ಷ, ಶೋಭಾ, ಲ್ಯಾಬ್ ಟೆಕ್ನಿಷಿಯನ್ ರಾಜನಾಯಕ್, ಮೋಹನ್, ರಂಜನ್ ಇದ್ದರು.