

ಕೋಟ: ಕೋಟೇಶ್ವರ ಶ್ರೀ ಕಾಳಾವರ ವರದರಾಜ್ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರ ಸುರಕ್ಷಿತ ಕ್ರಮಕ್ಕೆ ಇತ್ತೀಚೆಗೆ ಮನವಿ ಸಲ್ಲಿಸಲಾಯಿತು.
ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಿ.ಎಸ್ಸಿ ತರಗತಿ ವಿದ್ಯಾರ್ಥಿ ಧನುಷ್ ಯು.ಅಮೀನ್ ತನ್ನದಲ್ಲದ ತಪ್ಪಿಗೆ ಅಮಾಯಕವಾಗಿ ರಸ್ತೆ ಅಪಘಾತಕ್ಕೆ ತುತ್ತಾಗಿ ದುರ್ಮರಣಕ್ಕೀಡಾಗಿದ್ದು, ಕೋಟೇಶ್ವರ ಹಾಲಾಡಿ ರಾಜ್ಯ ಹೆದ್ದಾರಿಯಲ್ಲಿ ತುರ್ತಾಗಿ ಸೂಕ್ತ ರಸ್ತೆ ಸುರಕ್ಷತಾ ಕ್ರಮ ಅಳವಡಿಸಬೇಕು ಮತ್ತು ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುವ ಚಾಲಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಅವರ ನೇತೃತ್ವದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ನಿಯೋಗ ಉಡುಪಿ ಜಿಲ್ಲಾಧಿಕಾರಿಗಳು, ಕುಂದಾಪುರ ತಹಸೀಲ್ದಾರ್, ಕುಂದಾಪುರ ಪೊಲೀಸ್ ನಿರೀಕ್ಷಕರು, ಕುಂದಾಪುರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಮತ್ತು ಗ್ರಾಪಂ ಕೋಟೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.