ವಿದ್ಯುತ್ ಸಂಪರ್ಕ ಕಲ್ಪಿಸಲು ಮನವಿ

10 MDL 01
ಮುದಗಲ್ ವಾರ್ಡ್ ನಂ.3 ರ ನಿವಾಸಿಗಳು ಕಂದಾಯ ನಿರೀಕ್ಷಕ ಶಂಕ್ರಪ್ಪ ಪಟ್ಟಣಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖರಾದ ಸಂತೋಷ ಕಟ್ಟಿಮನಿ, ಸಿದ್ದಪ್ಪ, ಹಾಜಿಸಾಬ್, ಶ್ಯಾಮಿದ್ ಸಾಬ್ ಇತರರಿದ್ದರು.
Published on

ಮುದಗಲ್: ಪಟ್ಟಣದ ವೆಂಕಟರಾಯನ ಪೇಟೆಯ ವಾರ್ಡ್ ನಂ. 3ರ ವ್ಯಾಪ್ತಿಯ ಕೆಲ ಲೇಔಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ನಾಡ ಕಾರ್ಯಾಲಯದ ಕಂದಾಯ ನಿರೀಕ್ಷಕ ಶಂಕ್ರಪ್ಪ ಪಟ್ಟಣಶೆಟ್ಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

12 -13 ವರ್ಷಳಿಂದ ನೋಮನ್ ಕಾಲನಿ, ಹಸನ್ ಮಿಯಾ ಲೇಔಟ್‌ಗಳಲ್ಲಿ ನೂರಾರು ಬಡ ಕುಟುಂಬಗಳು ವಾಸವಾಗಿದ್ದು ವಿದ್ಯುತ್ ಕಂಬಗಳಿಗೆ ವಿದ್ಯುತ್ ಸಂಪರ್ಕ ನೀಡಿಲ್ಲ.

ಪುರಸಭೆ ಹಾಗೂ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿದರೂ ಸ್ಪಂದಿಸುತ್ತಿಲ್ಲ. ಜೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದಿದ್ದರೆ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net