ಮೈಸೂರು: ಸಂಚಾರ ನಿಯಮ ಉಲ್ಲಂಘನೆ ಹಳೆಯ ಪ್ರಕರಣಗಳಲ್ಲಿ ಮತ್ತೊಮ್ಮೆ ಸಾರ್ವಜನಿಕರಿಗೆ ಶೇ. 50ರ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಅವಕಾಶ ನೀಡಬೇಕು ಎಂದು ಆನಂದನಗರ ಬಡಾವಣೆಯ ಎಂ.ಎಸ್.ನಂಜುಂಡಸ್ವಾಮಿ ಮನವಿ ಮಾಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆಯ ಹಳೆಯ ಪ್ರಕರಣಗಳಿಗೆ ಸರ್ಕಾರ ಶೇ.50ರಷ್ಟು ರಿಯಾಯಿತಿ ನೀಡಿದಾಗ ಸ್ವಯಂ ಪ್ರೇರಿತವಾಗಿ ದಂಡ ಪಾವತಿಸಿದ್ದಲ್ಲದೆ ಜನರಿಗೂ ಅನುಕೂಲವಾಗಿತ್ತು. ಈಗ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಲಕ್ಷಾಂತರ ಜನರು ಹಣದ ತೊಂದರೆಯಿಂದ ದಂಡ ಪಾವತಿಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡಲು ಮುಖ್ಯಮಂತ್ರಿ, ಗೃಹಮಂತ್ರಿ, ಹಿರಿಯ ಅಧಿಕಾರಿಗಳು ದಯಮಾಡಿ ಮತ್ತೊಮ್ಮೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ರಿಯಾಯಿತಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದ್ದಾರೆ.