ವಿಟ್ಲ: ಮಾಣಿಲದಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡನನ್ನು ತಕ್ಷಣ ಬಂಽಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ದಲಿತ ಹಕ್ಕು ಸಮಿತಿ (ಡಿಎಚ್‌ಎಸ್) ಆಗ್ರಹಿಸಿದೆ.
ದಲಿತ ಅಪ್ರಾಪ್ತ ವಿದ್ಯಾರ್ಥಿನಿಗೆ ಬಿಜೆಪಿ ಮುಖಂಡ ಮಹೇಶ್ ಭಟ್ ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ ಹಿಂಸೆ ಎಸಗಿದ್ದಾನೆ. ಈತನ ವರ್ತನೆ ಬಗ್ಗೆ ಸ್ಥಳೀಯರು ದಲಿತ ಹಕ್ಕುಗಳ ಸಮಿತಿಯ ಮುಖಂಡರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಡಿಎಚ್‌ಎಸ್ ತಕ್ಷಣ ಸ್ಪಂದಿಸಿದೆ. ಪೊಲೀಸ್ ಅಽಕಾರಿಗಳು ಸಂತ್ರಸ್ತ ಬಾಲಕಿಯಿಂದ ಮಾಹಿತಿ ಪಡೆದಾಗ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಕ್ರಮವನ್ನು ಪ್ರಶ್ನಿಸಿ ಡಿಎಚ್‌ಎಸ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳ ಗಮನಕ್ಕೆ ತಂದಿದ್ದು, ಬಳಿಕ ಅವರ ಸೂಚನೆಯಂತೆ ಪಾಲಕರ ಸಮ್ಮುಖದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸಮಿತಿ ತಿಳಿಸಿದೆ.
ಪೋಕ್ಸೋ ಪ್ರಕರಣವನ್ನು ಮಾ.೨೪ರಂದು ದಾಖಲಿಸಿಕೊಂಡಿದ್ದು, ಆರೋಪಿ ಮಹೇಶ್ ಭಟ್‌ನನ್ನು ಬಂಽಸುವಲ್ಲಿ ಪೊಲೀಸ್ ಇಲಾಖೆ ಬೇಜಾವಾಬ್ದಾರಿ ವಹಿಸಿದೆ. ಆರೋಪಿ ರಾಜಕೀಯ ಪ್ರಭಾವ ಬಳಸಿ ಪ್ರಕರಣದ ದಿಕ್ಕು ತಪ್ಪಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಜಿಲ್ಲಾ ವರಿಷ್ಟಾಽಕಾರಿಗಳು ಗಮನ ಹರಿಸಿ ಪ್ರಕರಣ ತನಿಖೆಯು ಹಾದಿ ತಪ್ಪದಂತೆ ಮುತ್ತುವರ್ಜಿ ವಹಿಸಬೇಕಾಗಿದೆ. ಆರೋಪಿಯನ್ನು ಕೂಡಲೇ ಬಂಽಸಿ ಕಠಿಣ ಪ್ರಕರಣದಡಿ ಕಾನೂನು ಕ್ರಮ ಕೈಗೊಳ್ಳುವಂತೆ ಡಿಎಚ್‌ಎಸ್ ದ.ಕ ಜಿಲ್ಲಾ ಸಮಿತಿಯು ಒತ್ತಾಯಿಸುತ್ತದೆ ಎಂದು ಡಿಎಚ್‌ಎಸ್ ನ ಜಿಲ್ಲಾ ಮುಖಂಡರಾದ ಈಶ್ವರಿ ಪದ್ಮುಂಜ ಹಾಗೂ ಕೃಷ್ಣ ತಣ್ಣೀರುಬಾವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.