ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ ಕರೆಯಲು ಮನವಿ

Published on

ನರಗುಂದ: ಕುಷ್ಟಗಿಯಿಂದ ನರಗುಂದ ಮಾರ್ಗವಾಗಿ ಘಟಪ್ರಭಾವರೆಗೆ ನೂತನ ರೈಲು ಮಾರ್ಗ ನಿರ್ಮಾಣ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ ಕರೆಯುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ರೈಲ್ವೆ ಹೋರಾಟ ಸಮಿತಿ ಸದಸ್ಯರು ಶನಿವಾರ ಪಟ್ಟಣದಲ್ಲಿ ಮನವಿ ಸಲ್ಲಿಸಿದರು.

ಕರ್ನಾಟಕದ ಕೇಸರಿ ಬಿರುದಾಂಕಿತ ದಿ. ಜಗನ್ನಾಥರಾವ್ ಜೋಶಿ ಅವರು ನರಗುಂದದಲ್ಲಿ ಹುಟ್ಟಿ ಇಡೀ ದೇಶಕ್ಕೆ ಕೀರ್ತಿ ತರುವ ಕೆಲಸ ಮಾಡಿದ್ದಾರೆ. ಅವರು ರಾಜ್ಯಸಭೆ ಸದಸ್ಯರಾಗಿದ್ದಾಗ ರೈಲುಮಾಗರ್ ರಚನೆಗೆ ಸಾಕಷ್ಟು ಹೋರಾಟ ಮಾಡಿದ್ದಾರೆ. ಈ ಭಾಗಕ್ಕೆ ರೈಲುಮಾರ್ಗ ಅತ್ಯಗತ್ಯವಾಗಿದೆ. ಈ ಕುರಿತು ಈಗಾಗಲೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಪ್ರಯೋಜನವಾಗಿಲ್ಲ. ಮಹತ್ವದ ಯೋಜನೆಗೆ ಸಂಬಂಧಿಸಿದಂತೆ ನರಗುಂದದಲ್ಲಿ ಎಲ್ಲ ಇಲಾಖೆ ಅಧಿಕಾರಿ, ಜನಪ್ರತಿನಿಧಿಗಳ ಸಭೆ ಕರೆದು ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸೂಕ್ತ ಸ್ಪಂದನೆ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಶಾಸಕ ಸಿ.ಸಿ. ಪಾಟೀಲ, ರೈಲ್ವೆ ಹೋರಾಟ ಸಮಿತಿ ಸಂಚಾಲಕ ಚನ್ನು ನಂದಿ, ಮನೋಹರ ಹುಯಿಲಗೋಳ, ಬಸವರಾಜ ಸಾಬಳೆ, ಮಾರುತಿ ಭೋಸಲೆ, ಜೆ.ಆರ್. ಕದಂ, ನಭಿಸಾಬ ಕಿಲ್ಲೇದಾರ, ನಾಗೇಶ ಅಪ್ರೋಜಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net