ಬೇಡಿಕೆ ಈಡೇರಿಸುವಂತೆ ಆಗ್ರಹ

IMG20240913172157.jpg
Published on
ಬೆಳಗಾವಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿದರು. ಸೇವಾ ಭದ್ರತೆ ನೀಡಬೇಕು, ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ನೀಡಬೇಕು, ಬಾಕಿ ವೇತನ ಪಾವತಿಸಬೇಕು, ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ರೂ. ಪರಿಹಾರ ನೀಡಬೇಕು, ಅಡುಗೆ ಕೋಣೆಯಲ್ಲಿ ಸುರಕ್ಷಾ ಸಲಕರಣೆಗಳನ್ನು ಒದಗಿಸಬೇಕು, ಇಲಾಖೆಯಿಂದ ನೇರವಾಗಿ ಸಂಬಳ ನೀಡಬೇಕು, ನಿವೃತ್ತಿ ವಯೋಮಾನದ ವರೆಗೂ ವೃತ್ತಿಯಲ್ಲಿ ಮುಂದುವರಿಸಬೇಕು, ವಾರದ ರಜೆ ನೀಡಬೇಕು, ಕಾರ್ಮಿಕ ಇಲಾಖೆ ನಿಯಮದ ಪ್ರಕಾರ ಕನಿಷ್ಠ 31 ಸಾವಿರ ರೂ. ವೇತನ ನೀಡಬೇಕು ಎಂದು ಮನವಿ ಸಲ್ಲಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಪ್ರದೀಪ ದಳವಾಯಿ, ಲಕ್ಕಪ್ಪ ಕಾಂಬಳೆ, ಶ್ರೀಕಾಂತ ಸಣ್ಣಕ್ಕಿ, ಲಗಮಣ್ಣ ಸರ್ಜನ್, ರಮೇಶ್ ಪಾಟೀಲ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net