ಬೇಡಿಕೆ ಈಡೇರಿಸುವಂತೆ ಟೆಂಗಿನಕಾಯಿಗೆ ಮನವಿ

h13-noukarara sangha
Published on

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ನಗರ ಹಾಗೂ ಗ್ರಾಮೀಣ ಶಾಖೆ ಪದಾಧಿಕಾರಿಗಳು, ನಗರದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಯಥಾವತ್ತಾಗಿ ಜಾರಿ ಮಾಡಿ ಆದೇಶ ಹೊರಡಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್‌ಎಸ್) ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರು, ಸದನದಲ್ಲಿ ನೌಕರರ ಧ್ವನಿಯಾಗಿ ಮಾತನಾಡಿ, ಬೇಡಿಕೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವೆ ಎಂದು ಭರವಸೆ ನೀಡಿದರು.
ಹುಬ್ಬಳ್ಳಿ ನಗರ ಅಧ್ಯಕ್ಷ ಡಾ. ಪ್ರಲ್ಹಾದ ಗೆಜ್ಜಿ, ಗ್ರಾಮೀಣ ಅಧ್ಯಕ್ಷ ವಿ.ಎಫ್. ಚುಳಕಿ, ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net