ಸುಳ್ಯದಲ್ಲಿ ಆಧಾರ್ ಕೇಂದ್ರ ತೆರೆಯಲು ಮನವಿ

New Project (28)
Published on

ಸುಳ್ಯ: ಸುಳ್ಯ ನಗರದಲ್ಲಿ ಆಧಾರ್ ಕೇಂದ್ರ ಇಲ್ಲದೆ ಹೊಸ ಆಧಾರ್ ಮಾಡಲು, ತಿದ್ದುಪಡಿ, ಅಪ್‌ಡೇಷನ್ ಮಾಡಲು ಸಾಧ್ಯವಾಗದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದಂದ ಸುಳ್ಯದಲ್ಲಿ ಕೂಡಲೇ ಆಧಾರ್ ಕೇಂದ್ರ ತೆರಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.

ಆಧಾರ್ ಕೇಂದ್ರ ಇಲ್ಲದೆ ಸುಳ್ಯ ನಗರ, ಗ್ರಾಮಾಂತರ ಪ್ರದೇಶಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಆಧಾರ್ ಕೇಂದ್ರ ತೆರೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಸುಳ್ಯಕ್ಕೆ ಆಗಮಿಸಿದ ಸಂಸದರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಅರಂತೋಡು ಮುಖ್ಯ ಪೇಟೆಯ ಅಂಚೆ ಕಚೇರಿಯಲ್ಲಿ ತೆರೆಯಲಾಗಿದ್ದ ಆಧಾರ್ ಕೇಂದ್ರವನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಅರಂತೋಡಿನಲ್ಲಿ ಆಧಾರ್ ಕೇಂದ್ರ ತೆರೆಯಬೇಕು ಎಂದು ಅರಂತೋಡು ಗ್ರಾಪಂ ಅಧ್ಯಕ್ಷ ಕೇಶವ ಅಡ್ತಲೆ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಅರಂತೋಡಿನಲ್ಲಿ ಆಧಾರ್ ಕೇಂದ್ರ ತೆರೆದರೆ ಸಂಪಾಜೆ, ಮರ್ಕಂಜ, ಅರಂತೋಡು ಗ್ರಾಮದ ಗ್ರಾಮಸ್ಥರಿಗೆ ಸಹಾಯಕವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಸಾರ್ವಜನಿಕರು ಸಂಸದರಿಗೆ ಮನವಿ ಸಲ್ಲಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಅರಂತೋಡು ಗ್ರಾಪಂ ಅಧ್ಯಕ್ಷ ಕೇಶವ ಅಡ್ತಲೆ, ಹರೀಶ್ ಕಂಜಿಪಿಲಿ, ಸಂತೋಷ್ ಕುತ್ತಮೊಟ್ಟೆ, ದಯಾನಂದ ಕುರುಂಜಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net