ಪತ್ರಕರ್ತರಿಗೆ ರಕ್ಷಣೆ ನೀಡಲು ಮನವಿ

Reporter
Published on

ಶಿರಸಿ: ದಾಂಡೇಲಿಯಲ್ಲಿ ಕಾರ್ಯನಿರತ ಪತ್ರಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ಪತ್ರಕರ್ತರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಉಪವಿಭಾಗಾಧಿಕಾರಿ ಕೆ. ಕಾವ್ಯಾರಾಣಿ ಹಾಗೂ ಪಿಎಸ್‌ಐ ನಾಗಪ್ಪ ಬಿ. ಅವರ ಮೂಲಕ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆರಕ್ಷಕ ವೃತ್ತ ನಿರೀಕ್ಷಕ ಭೀಮಣ್ಣ ಸೂರಿ ಅವರು ಪತ್ರಕರ್ತರೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ. ಅವರ ಮೇಲೆ ಸುಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಮನವಿ ಮೂಲಕ ಒತ್ತಾಯಿಸಲಾಗಿದೆ.

ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಸಂದೇಶ ಭಟ್ ಬೆಳಖಂಡ, ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ, ಉಪಾಧ್ಯಕ್ಷೆ ವಿನುತಾ ಹೆಗಡೆ, ಜಿಲ್ಲಾ ಸಂಘದ ಖಜಾಂಚಿ ರಾಜೇಂದ್ರ ಹೆಗಡೆ ಹಾಗೂ ಪತ್ರಕರ್ತರಾದ ರಾಘವೇಂದ್ರ ಬೆಟ್ಟಕೊಪ್ಪ, ಮಂಜುನಾಥ ಸಾಯೀಮನೆ, ಪ್ರದೀಪ ಶೆಟ್ಟಿ, ರಾಜು ಕಾನಸೂರು, ಬಿ.ವಿ.ಹುಲಿಗೇಶ, ಮಂಜುನಾಥ ಈರಗೊಪ್ಪ, ಪ್ರವೀಣ ಹೆಗಡೆ, ಶಿವಪ್ರಸಾದ ಹಿರೇಕೈ, ವಿನಾಯಕ ಹೆಗಡೆ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net