ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ

ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ
Published on

ನಾಪೋಕ್ಲು: ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಮತ್ತು ಕಂದಾಯ ಆಯುಕ್ತ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ಬಡವರಿಗೆ ನಿವೇಶನಕ್ಕಾಗಿ ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ ಸಲ್ಲಿಸಿದರು.

ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕ್ಷೇತ್ರಗಳಲ್ಲಿ ಸುಮಾರು 800 ನಿರಾಶ್ರಿತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿದ್ದು, 30 ವರ್ಷಗಳಿಂದ ನಿವೇಶನಕ್ಕಾಗಿ ಮನವಿ ಸಲ್ಲಿಸುತ್ತಾ ಬಂದಿದ್ದರೂ, ಇದುವರೆಗೂ ನಿವೇಶನ ಲಭ್ಯವಾಗಿಲ್ಲ ಎಂದು ವಿವರಿಸಿದರು.

ಈ ಸಂದರ್ಭ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಮೊಣ್ಣಪ್ಪ, ಪೆಗ್ಗೋಳಿ ನಿವೇಶನ ಹೋರಾಟ ಸಮಿತಿಯ ಭೋಜ, ಎಚ್.ಎಸ್. ಸತೀಶ್, ಎಚ್.ಎಸ್. ಪುನೀತ್, ಕುಮಾರ್ ಸಮಾತಳ, ನಿಯೋಗದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net