ಕಾಲುಜಾರಿ ನದಿಗೆ ಬಿದ್ದ ಮಹಿಳೆಯ ರಕ್ಷಣೆ

IMG-20231227-WA0090
Published on

ಶ್ರೀರಂಗಪಟ್ಟಣ: ಗಂಜಾಂನ ಹೊರವಲಯದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿಗೆ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ಗೃಹರಕ್ಷಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಬುಧವಾರ ಸಂಗಮಕ್ಕೆ ಆಗಮಿಸಿದ್ದ ಆಂಧ್ರಪ್ರದೇಶ ಮೂಲದ ಮಹಿಳೆ ಕಾವೇರಿ ನದಿ ತೀರದಲ್ಲಿ ಕುಟುಂಬಸ್ಥರೊಂದಿಗೆ ವಿಹರಿಸುತ್ತಿದ್ದ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದರು. ಈ ವೇಳೆ ಸ್ಥಳದಲ್ಲಿದ್ದ ಗೃಹ ರಕ್ಷಕ ದಳದ ನೌಕರ ಅನಿಲ್‌ಕುಮಾರ್ ನದಿಗೆ ಜಿಗಿದು ಮಹಿಳೆಯನ್ನು ರಕ್ಷಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ನೌಕರನಿಗೆ ಕುಟುಂಬಸ್ಥರು ಧನ್ಯವಾದ ಅರ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net