ಬಾಗೇಪಲ್ಲಿ: ಪಟ್ಟಣದ ಡಿವಿಜಿ ಮುಖ್ಯರಸ್ತೆ ವಿಭಜಕ ಹಾಗೂ ಅಂಗಡಿಗಳ ಮುಂದೆ ಮಲಗಬೇಕಾದ ದುಸ್ಥಿತಿಯಲ್ಲಿದ್ದ ಮಹಿಳೆಯನ್ನು ಮಹಿಳಾ ಸಾಂತ್ವನ ಕೇಂದ್ರದ ಸಿಬ್ಬಂದಿ ಹಾಗೂ ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ರಣೆ ಮಾಡಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಪಟ್ಟಣದ ರಸ್ತೆ, ಬೀದಿಗಳಲ್ಲಿಯೇ ನಿದ್ರಿಸುತ್ತಿದ್ದ ಮಹಿಳೆ ತಾಲೂಕಿನ ಸಡ್ಲವಾರಿಪಲ್ಲಿಯವರು ಎಂದು ಗುರುತಿಸಲಾಗಿದ್ದು, ಮಹಿಳೆಗೆ ಮೂವರು ಪುತ್ರಿಯರು ಇದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮಹಿಳೆಗೆ ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ತಿಳಿಸಿದ್ದಾರೆ.