ಪೂರ್ಣ ಪ್ರಮಾಣದಲ್ಲಿ ಮೀಸಲಾತಿ ಜಾರಿಯಾಗಿಲ್ಲ: ಡಾ.ಪುಷ್ಪಾ ಅಮರನಾಥ್ ವಿಷಾಧ

11
Published on

ಮೈಸೂರು: ಸರ್ಕಾರ ಮೀಸಲಾತಿ ಘೋಷಿಸಿದ್ದರೂ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ವಿಷಾಧ ವ್ಯಕ್ತಪಡಿಸಿದರು.

ನಗರದ ವಿಶ್ವಮೈತ್ರಿ ಬುದ್ಧವಿಹಾರದಲ್ಲಿ ಭಾನುವಾರ ಆಯೋಜಿಸಿದ್ದ ಲೇಖಕ ಗಂಗಾಧರ್ ಕಂದೇಗಾಲ ಅವರ ‘ಬೆಂಕಿ ಬಿರುಗಾಳಿ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಮೀಸಲಾತಿಯಿಂದಾಗಿ ನಾವು ಇಂದು ಮಾತನಾಡುವ ಹಂತಕ್ಕೆ ಬೆಳೆದಿದ್ದೇವೆ. ಆದರೂ ಮಹಿಳೆಯರಿಗೆ ಸಂವಿಧಾನಬದ್ಧ ಪೂರ್ಣ ಮೀಸಲಾತಿ ಪೂರ್ಣ ಪ್ರಮಾಣದಲ್ಲಿ ದೊರೆತಿಲ್ಲ. ಅಲ್ಲದೇ ಸಾಹಿತ್ಯ ಕ್ಷೇತ್ರದಲ್ಲೂ ದಲಿತ ಮಹಿಳೆಯರ ಸಂಖ್ಯೆ ಇಲ್ಲವೇ ಇಲ್ಲ ಎಂದರು.

ರಾಜ್ಯದ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿ ಬೇರೆ ರಾಜ್ಯಗಳಲ್ಲಿ ಅನುಷ್ಠಾನ ವಾಡುತ್ತಿರುವ ಬಿಜೆಪಿ, ಕರ್ನಾಟಕದಲ್ಲಿ ಮಾತ್ರ ಗ್ಯಾರಂಟಿ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದೆ. ಈ ಮೂಲಕ ಫಲಾನುಭವಿಗಳನ್ನು ಅವಮಾನಿಸುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚರ್ಚಾ ಗೋಷ್ಠಿ ಹಾಗೂ ಸಂವಾದಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಲೇಖಕ ಹರಕುಮಾರ್ ಮಾತನಾಡಿ, ಬರಹಗಳು ದಾಖಲೆಯಾಗಿ ಉಳಿಯತ್ತವೆ. ಹಾಗಾಗಿ, ತಮ್ಮ ಅನುಭವವನ್ನು ದಾಖಲಿಸುವ ಕೆಲಸವನ್ನು ಪ್ರತಿಯೊಬ್ಬ ದಲಿತ ಹೋರಾಟಗಾರರೂ ಮಾಡಬೇಕು ಎಂದು ಕೋರಿದರು.

ಮಾಜಿ ಮೇಯರ್ ಪುರುಷೋತ್ತಮ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಲೇಖಕರಾದ ಹನಸೋಗೆ ಸೋಮಶೇಖರ್, ಗೋವಿಂದಸ್ವಾಮಿ ಗುಂಡಾಪುರ, ಬಿ.ಎಂ.ನಾಗೇಶ್ ರಾಜ್, ಸಿದ್ದಸ್ವಾಮಿ, ಬದನವಾಳು ಬಸವಣ್ಣ, ಪತ್ರಕರ್ತ ಸೋಮಯ್ಯ ಮಲೆಯೂರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net