ದಲಿತ ಸಿಎಂ ಮತಬ್ಯಾಂಕ್​ಗಷ್ಟೇ ಮೀಸಲು

CTD GOVINDA KARAJOLA---
Published on

ಹುಬ್ಬಳ್ಳಿ : ದಲಿತ ಸಿಎಂ ವಿಚಾರವನ್ನು ಕೇವಲ ಮತಬ್ಯಾಂಕ್ ಹಾಗೂ ಚರ್ಚೆಗೆ ಬಳಸಿಕೊಳ್ಳುವ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸತೀಶ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಲು 40 ವರ್ಷ ಹೋರಾಟ ಮಾಡಿದರು. ಡಾ. ಜಿ. ಪರಮೇಶ್ವರ ಅವರು ಇನ್ನೂ ಹೋರಾಟ ಮಾಡುತ್ತಲೇ ಇದ್ದಾರೆ. ಹೀಗಾಗಿ, ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ಕನಸಿನ ಮಾತು. ಕಾಂಗ್ರೆಸ್​ನವರು ಯಾವುದೇ ಕಾರಣಕ್ಕೂ ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಟೀಕಿಸಿದರು.

ಸ್ವಾತಂತ್ರ್ಯ ಸಿಕ್ಕಾಗಿನಿಂದ ಇದುವರೆಗಿನ ಯಾವುದೇ ಅವಧಿಯಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡದ ಕಾಂಗ್ರೆಸ್, ಅವರನ್ನು ಮತಬ್ಯಾಂಕ್​ಗೆ ಸೀಮಿತಿಗೊಳಿಸಿದೆ. ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಒಳಮೀಸಲಾತಿಯ ಭರವಸೆ ಇನ್ನೂ ಈಡೇರಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಒಳ ಮೀಸಲಾತಿಗೆ ನಾವು ಬದ್ಧರಿದ್ದೇವೆ ಎಂದು ಹೇಳಿದ್ದರೂ, ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ದೂರಿದರು.

ಸಾಮಾಜಿಕ ನ್ಯಾಯ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಚ್ಛಾಶಕ್ತಿ ತೋರುತ್ತಿಲ್ಲ. ಸಮಾಜದಲ್ಲಿ ವಿಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net