ಗುಣಮಟ್ಟ ಶಿಕ್ಷಣಕ್ಕಾಗಿ ವಸತಿ ಶಾಲೆ ಪ್ರಾರಂಭ

ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಎ.ಮಂಜು, ರವಿಚಂದ್ರ, ಕುಮಾರ್ ಇತರರಿದ್ದರು.
ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಎ.ಮಂಜು, ರವಿಚಂದ್ರ, ಕುಮಾರ್ ಇತರರಿದ್ದರು.
Published on

ಅರಕಲಗೂಡು; ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಸರ್ಕಾರ ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಪ್ರಯೋಜನ ಪಡೆದು ವಿದ್ಯಾವಂತರಾಗುವಂತೆ ಶಾಸಕ ಎ.ಮಂಜು ಸಲಹೆ ನೀಡಿದರು.

ತಾಲೂಕಿನ ದೊಡ್ಡಮಗ್ಗೆ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಸತಿ ಶಾಲೆಗಳ ಶಿಕ್ಷಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶ, ಸಮಾಜ ಹಾಗೂ ಬದುಕು ಬದಲಾಗಬೇಕಾದರೆ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗುಣಮಟ್ಟದ ಶಿಕ್ಷಣ ಇಲ್ಲದಿದ್ದರೆ ಪ್ರಸ್ತುತ ದಿನಗಳಲ್ಲಿ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.

ಉತ್ತಮ ಶಿಕ್ಷಕರು, ಹೆಚ್ಚಿನ ಅಂಕಗಳಿಸಿದ, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಜ್ಯ ವಸತಿ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ರವಿಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸುಮಂತ್, ಜಿಲ್ಲಾ ಸಮನ್ವಯ ಅಧಿಕಾರಿ ಸುಮಂತ್, ಬಿಇಒ ನಾರಾಯಣ್, ತಾಲೂಕು ವಸತಿ ಶಾಲೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net