ವಸತಿ ಶಾಲೆಗಳು ಅತ್ಯುತ್ತಮ ಶೈಕ್ಷಣಿಕ ಕೇಂದ್ರಗಳು

KDR3 (1)
Published on

ಕಡೂರು: ವಸತಿ ಶಾಲೆಗಳು ಅತ್ಯುತ್ತಮ ಶೈಕ್ಷಣಿಕ ಕೇಂದ್ರವಾಗಬೇಕು ಎಂಬ ಹಿನ್ನಲೆಯಲ್ಲಿ ಸಾಧ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಗೆದ್ಲೆಹಳ್ಳಿ ಸಮೀಪದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಗೆ 5 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಗೆದ್ಲೆಹಳ್ಳಿ ಮೊರಾರ್ಜಿ ವಸತಿ ಶಾಲೆ 6ರಿಂದ 10ನೇ ತರಗತಿವರೆಗೆ ನಡೆಯುತ್ತಿದ್ದು ಹೆಚ್ಚುವರಿ ಕೊಠಡಿಗಳಲ್ಲಿ ಮೊದಲ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳು ಪ್ರವೇಶ ಈ ಶೈಕ್ಷಣಿಕ ವರ್ಷಕ್ಕೆ ನಡೆಯಲಿದೆ ಗುತ್ತಿಗೆದಾರರು ಶೀಘ್ರ ಕಟ್ಟಡ ನಿರ್ಮಾಣ ಮಾಡಿ ಕೊಡಬೇಕು ಎಂದು ಸೂಚಿಸಿದರು.

ಪ್ರಚಾರ್ಯೆ ಮಂಜುಳಾ ಮಾತನಾಡಿ, ಮೂರಾರ್ಜಿ ವಸತಿ ಶಾಲೆ ಈಗಾಗಲೇ ಉತ್ತಮ ಫಲಿತಾಂಶ ನೀಡುತ್ತಿದೆ. ಈಗ ಹೆಚ್ಚುವರಿಯಾಗಿ ಪಿಯು ತರಗತಿಗಳಿಗೆ 12 ಕೊಠಡಿಗಳ ನಿರ್ಮಾಣಕ್ಕೆ ಶಾಸಕರು ಅನುದಾನ ನೀಡಿರುವುದು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಮೊರಾರ್ಜಿ ವಸತಿ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಪುರಸಭೆ ಸದಸ್ಯ ಕೆ.ಎಂ.ಮೋಹನ್ ಕುಮಾರ್, ಬಳ್ಳೇಕೆರೆ ರೇಣುಕಪ್ಪ, ಬಸವರಾಜು, ಮಲ್ಲೇಶ್ವರ ವಸಂತ ಕುಮಾರ್, ಶಿವೇಗೌಡ, ಚಂದ್ರಕಲಾ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net