ರಸ್ತೆ ದುರಸ್ತಿಗೆ ನಿವಾಸಿಗಳ ಆಗ್ರಹ

29 vikram 10
Published on

ವಿಜಯಾಣಿ ಸುದ್ದಿಜಾಲ ಧಾರವಾಡ

ನಗರದ ಮುಖ್ಯ ಅಂಚೆ ಕಚೇರಿಯಿಂದ ಹಿಂದಿ ಪ್ರಚಾರ ಸಭಾ ವೃತ್ತದ ರಸ್ತೆಯಲ್ಲಿನ ಗುಂಡಿಗಳಿಂದ ವಾಹನ ಸವಾರರು ಬೀಳುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ರಸ್ತೆ ದುರಸ್ತಿಗೆ ಕ್ರಮವಹಿಸುತ್ತಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.

ನಗರದ ಮುಖ್ಯ ಅಂಚೆ ಕಚೇರಿಯಿಂದ ಹಿಂದಿ ಪ್ರಚಾರ ಸಭಾ ವೃತ್ತವರೆಗೆ ಕಾಂಕ್ರೀಟ್​ ರಸ್ತೆ ಮಾಡಲಾಗುತ್ತಿದೆ. ಆದರೆ ರಾಜೀವಗಾಂಧಿ ಶಾಲೆಯಿಂದ ಸಭಾವರೆಗಿನ ರಸ್ತೆ ಕಾಂಕ್ರೀಟ್​ ಆಗಿದೆ. ಶಾಲೆಯಿಂದ ಅಂಚೆ ಕಚೇರಿವರೆಗಿನ ರಸ್ತೆ ಕಾಮಗಾರಿ ಪೂರ್ಣವಾಗಿಲ್ಲ. ಈ ರಸ್ತೆಯಲ್ಲಿ ಮಳೆಯಿಂದ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ರಾತ್ರಿ ಸಮಯದಲ್ಲಿ ಸಾಕಷ್ಟು ಜನರು ಬಿದ್ದು ಗಾಯಗೊಂಡಿದ್ದರೂ ದುರಸ್ತಿ ಮಾಡುತ್ತಿಲ್ಲ.

ಈ ರಸ್ತೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರನಿಗೆ ಹಣ ಸಂದಾಯ ಮಾಡದ ಕಾರಣ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದಾರೆ ಎನ್ನಲಾಗಿದೆ. ಇನ್ನು ಕೆಲ ದಿನಗಳಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳುತ್ತಲೇ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ ಹೊರತು ಗುಂಡಿ ಮುಚ್ಚುವುದಾಗಲಿ, ಕಾಮಗಾರಿ ಆರಂಭಿಸುವ ಕೆಲಸ ಮಾಡಿ ಜನರಿಗೆ ಅನುಕೂಲ ಕಲ್ಪಿಸಲು ಮುಂದಾಗುತ್ತಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆಯಲ್ಲಿನ ಗುಂಡಿಗಳಿಂದ ಸುಮಾರು 2 ಬಾರಿ ಗಾಡಿ ಮೇಲಿಂದ ಬಿದ್ದಿದ್ದೇನೆ. ಈ ವಿಷಯವಾಗಿ ಪಾಲಿಕೆ ಸದಸ್ಯರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಕೂಡಲೇ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಮೂಲಕ ವಾಹನ ಸವಾರರು ನಿರ್ಭೀತಿಯಿಂದ ಸಂಚಾರ ಮಾಡುವಂತೆ ಮಾಡಬೇಕು ಎಂದು ಸ್ಥಳಿಯ ನಿವಾಸಿ ಮಹಾದೇವ ಪಾಟೀಲ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net