

ಸಿಂಧನೂರು: ಆರ್.ಎಚ್. ಕ್ಯಾಂಪ್ 1 ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೂ, ಅಲ್ಪಸಂಖ್ಯಾತರಿಗೆ ನೀಡಿರುವುದಕ್ಕೆ ಆಕ್ರೋಶಗೊಂಡ 19 ಜನ ಗ್ರಾಪಂ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಗ್ರಾಪಂ ಕ್ಲರ್ಕ್ ಮಣಿಕಂಠಗೆ ಸದಸ್ಯರು ಶುಕ್ರವಾರ ರಾಜೀನಾಮೆ ಸಲ್ಲಿಸಿದರು.
ಗ್ರಾಪಂ ಎರಡನೆಯ ಅವಧಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೂ, ಬುಧವಾರ ನಡೆದ ಚುನಾವಣೆಯಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಸದಸ್ಯನನ್ನು ಅವಿರೋಧ ಆಯ್ಕೆಗೊಳಿಸಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಬಂಗಾಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ, ಅಧ್ಯಕ್ಷ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಬಂಗಾಲಿ ಸಮುದಾಯಕ್ಕೆ ಗ್ರಾಪಂ ಅಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ವಾಸುದೇವ ರಡ್ಡಿ, ಅರ್ಜುನ, ಸುಕುಮಾರ ಬೌಚಾರ್, ಕರಿಯಪ್ಪ, ಬಸವರಾಜ ಶರಣಪ್ಪ, ಬಿಪ್ರದಾಸ್ ಸರದಾರ, ಶೃತಿಮಾಲಾ ಸೇರಿ 19 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ.