ಗದ್ದುಗೆ ಏರಲು ಕಾರ್ಯಕರ್ತರ ಶ್ರಮ ಅಗತ್ಯ : ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕರೆ

New Project (17)
Published on

ಕಡಬ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಾಧಿಯಲ್ಲಿ ಕಡಬ ತಾಲೂಕು ಮತ್ತು ಕಡಬ ಪಟ್ಟಣ ಪಂಚಾಯಿತಿ ಅನುಷ್ಠಾನಿಸಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ಇದೀಗ ಪಟ್ಟಣ ಪಂಚಾಯಿತಿಗೆ ಚುನಾವಣೆ ಘೋಷಣೆಯಾಗಿದೆ. ಮೊದಲ ಚುನಾವಣೆಯಲ್ಲಿ ಬಿಜೆಪಿ ಗದ್ದುಗೆ ಹಿಡಿಯಲು ಕಾರ್ಯಕರ್ತರ ಅವಿರತ ಶ್ರಮ ಅಗತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಕಡಬದಲ್ಲಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಕಡಬ ತಾಲೂಕಿನ ಕಡಬ ಮಹಾಶಕ್ತಿ ಕೇಂದ್ರದ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಂಕಲ್ಪ ಸಮಾವೇಶವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಪಟ್ಟಣ ಪಂಚಾಯಿತಿ ಗೆಲುವಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್, ಕಿಶೋರ್ ಬೊಟ್ಯಾಡಿ, ಶಾಸಕ ಡಾ.ಭರತ್ ಶೆಟ್ಟಿ, ಮಾಜಿ ಸಚಿವ ಎಸ್.ಅಂಗಾರ, ಕಡಬ ಪಟ್ಟಣ ಪಂಚಾಯಿತಿ ಚುನಾವಣಾ ನಿರ್ವಹಣಾ ಸಮಿತಿ ಪ್ರಮುಖ್ ಕೃಷ್ಣ ಶೆಟ್ಟಿ ಕಡಬ ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷರಾದ ರವೀಂದ್ರನಾಥ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಳಿ, ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎನ್.ಕೆ., ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ಕಡಬ ಪಟ್ಟಣ ಪಂಚಾಯಿತಿ ಚುನಾವಣಾ ನಿರ್ವಹಣಾ ಸಮಿತಿ ಪ್ರಮುಖ್ ಬಾಲಕೃಷ್ಣ ಬಾಣಜಾಲು ಮೊದಲಾದವರಿದ್ದರು. ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ವಂದಿಸಿದರು. ವಿನಯ ಕುಮಾರ್ ಕಂದಡ್ಕ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net