ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

DSC_6345
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಧಾರವಾಡ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಮಂಗಳವಾರ ನಡೆಯಿತು. ಕಸಪಾ ಗೌರವ ಕಾರ್ಯದರ್ಶಿ ಪ್ರೊ. ಕೆ.ಎಸ್. ಕೌಜಲಗಿ 4 ನಿರ್ಣಯಗಳನ್ನು ಮಂಡಿಸಿದರು.

1. ಪ್ರಾಥಮಿಕ ಶಾಲಾ ಶೈಕ್ಷಣಿಕ ಸ್ಥಿತಿ ಮತ್ತು ಗುಣಮಟ್ಟ ಸುಧಾರಣೆಗಾಗಿ ಸರ್ಕಾರ ಕಟ್ಟುನಿಕಟ್ಟಿನ ಕ್ರಮ ಕೈಗೊಳ್ಳಬೇಕು.

2. ಕೇಂದ್ರ ಸರ್ಕಾರಿ ಸ್ವಾಮ್ಯದ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಹಾಗೂ ಬಹುರಾಷ್ಟ್ರೀಯ, ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೇಮಕಾತಿಯಲ್ಲಿ ಕನಿಷ್ಠ ಶೇ. 50ರಷ್ಟು ಮೀಸಲಾತಿ ನೀಡಬೇಕು.

3. ಧಾರವಾಡದಲ್ಲಿ ನಡೆದ 17ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಳಿಕೆ ಹಣವನ್ನು ಜಿಲ್ಲಾ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಸುಸಜ್ಜಿತ ಸಾಂಸ್ಕೃತಿಕ ಬಯಲು ರಂಗಮ0ದಿರ ನಿರ್ಮಿಸಲು ಬಳಸಿಕೊಳ್ಳಲುತೀರ್ಮಾನ ಕೈಗೊಳ್ಳಬೇಕು.

4. ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಈ ಹಿಂದೆ ಸರ್ಕಾರ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಎದುರಿನ ನಿವೇಶನವನ್ನು ಲೀಸ್ ಆಧಾರದಲ್ಲಿ ನೀಡಿದ್ದು, ಅದರ ಅವಽ ಮುಗಿದಿದೆ. ಸರ್ಕಾರ ಕೂಡಲೇ ಲೀಸ್ ಅವಽಯನ್ನು ನವೀಕರಿಸಿ ಪರಿಷತ್ತಿಗೆ ಶಾಶ್ವತ ಹಕ್ಕಿನ ಆಸ್ತಿಯಾಗಿ ಪರಿವರ್ತಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯ ಮಂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net