ಕುಷ್ಠರೋಗಮುಕ್ತ ಜಿಲ್ಲೆಯನ್ನಾಗಿಸಲು ಸಂಕಲ್ಪ ಮಾಡಿ

ರಾಯಚೂರಿನ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಮಾತನಾಡಿದರು. ಡಿಎಚ್‌ಒ ಡಾ.ಸುರೇಂದ್ರ ಬಾಬು, ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಡಾ.ನಂದಿತಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಯಶೋದಾ, ಸರ್ವೇಕ್ಷಣಾಧಿಕಾರಿ ಡಾ.ಗಣೇಶ ಇತರರಿದ್ದರು.

Published on

ರಾಯಚೂರು: ಜಿಲ್ಲಾದ್ಯಂತ ಜ.30ರಿಂದ ಫೆ.13ವರೆಗೆ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಸೂಚಿಸಿದರು.

ನಗರದ ಜಿಲ್ಲಾ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ ಇಲಾಖೆಯಿಂದ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ನಡೆಸಿ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಸಂಕಲ್ಪ ತೊಡಬೇಕು. ಶಾಲಾ-ಕಾಲೇಜುಗಳಲ್ಲಿ ಸ್ಪರ್ಶ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ರೋಗದ ಬಗ್ಗೆ ಅರಿವು ಮೂಡಿಸಬೇಕು. ದೇಹದ ಯಾವುದೇ ಭಾಗದಲ್ಲಿ ಸ್ಪರ್ಶಜ್ಞಾನವಿಲ್ಲದ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳಿದ್ದಲ್ಲಿ ರೋಗದ ಲಕ್ಷಣವಾಗಿದೆ. ಈ ಕುರಿತು ಸರ್ವಜನಿಕರಿಗೆ ತಿಳಿಸಬೇಕು ಎಂದರು.

ಡಿಎಚ್‌ಒ ಡಾ.ಸುರೇಂದ್ರ ಬಾಬು ಮಾತನಾಡಿ, ಇಲಾಖೆಯಿಂದ ಜಿಲ್ಲೆಯಲ್ಲಿ ಗೃಹ ಆರೋಗ್ಯ ಯೋಜನೆಯಡಿ ಮನೆ-ಮನೆ ಸರ್ವೇ ಮಾಡಿ ಅಧಿಕ ರಕ್ತದೊತ್ತಡ, ಡಯಾಬಿಟಿಸ್, ಓರಲ್ ಕ್ಯಾನ್ಸರ್ ಮತ್ತು ಸರ್ವೇಕಲ್ ಕ್ಯಾನ್ಸರ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಡಾ.ನಂದಿತಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಯಶೋದಾ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ಗಣೇಶ, ಡಾ.ಶಿವಕುಮಾರ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹ್ಮದ್ ಶಾಕೀರ ಮೊಹಿಯುದ್ದೀನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net