ಕುಟುಂಬ ನಿರ್ವಹಣೆಗೆ ಆರ್ಥಿಕ ನೆರವು ಕಲ್ಪಿಸಿಕೊಳ್ಳಲು ಸಲಹೆ

dj clk kaparahalli
Published on

ಚಳ್ಳಕೆರೆ: ಸ್ವಯಂ ಉದ್ಯೋಗ ಚಟುವಟಿಕೆಗಳಲ್ಲಿ ಮಹಿಳೆಯರು ಕುಟುಂಬ ನಿರ್ವಹಣೆಗೆ ಆರ್ಥಿಕ ನೆರವು ಕಲ್ಪಿಸಿಕೊಳ್ಳುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಹರ್ತಿಕೋಟೆ ವೀರೇಂದ್ರ ಸಿಂಹ ಸಲಹೆ ನೀಡಿದರು.

ತಾಲೂಕಿನ ಕಾಪರಹಳ್ಳಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಂಚಾಂಭ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿ,

ಸ್ಥಳೀಯ ಸಂಘ-ಸಂಸ್ಥೆಗಳ ತರಬೇತಿ ಮತ್ತು ಸ್ವಯಂ ಉದ್ಯೋಗ ಕೌಶಲ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಜೀವನ ನಿರ್ವಹಣೆಗೆ ಮನೆಯಲ್ಲಿ ಸಣ್ಣ ವ್ಯಾಪಾರ, ಟೈಲರಿಂಗ್, ಕಸೂತಿ ಕೆಲಸಗಳ ವೃತ್ತಿ ಬದುಕಲ್ಲಿ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಮೂಲ ಕಂಡುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯದರ್ಶಿ ಕೆ.ಶ್ರೀನಿವಾಸ್ ಮಾತನಾಡಿ, ಸಂಘದ ವತಿಯಿಂದ ಗ್ರಾಮಾಂತರ ಭಾಗದಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ ಮತ್ತು ವೃದ್ಧಾಶ್ರಮ ಸ್ಥಾಪನೆಗೆ ಶಾಸಕರು ಈಗಾಗಲೇ ತಾಲೂಕು ಆಡಳಿತಕ್ಕೆ 2 ಎಕರೆ ಜಾಗ ಮಂಜೂರಾತಿಗೆ ಸೂಚನೆ ನೀಡಿದ್ದಾರೆ.

ಸ್ಥಳೀಯರು ಸದುಪಯೋಗ ಮಾಡಿಕೊಳ್ಳುವ ಮೂಲಕ ಸಹಕರಿಸಬೇಕು ಎಂದರು. ಸಂಘದ ಅಧ್ಯಕ್ಷೆ ಪಿ.ಎಲ್.ಕರಿಯಮ್ಮ, ಉಪಾಧ್ಯಕ್ಷೆ ಆರ್.ರತ್ನ, ಪಂಕಜಾ, ಶಾಂತಮ್ಮ, ನಿರ್ಮಲಾ, ಯಲ್ಲಮ್ಮ, ನಿಂಗಮ್ಮ, ಲಲಿತಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net