ಹೆತ್ತ ತಾಯಿಯಂತೆ ಗೌರವಿಸಿ

1 mlv 1
Published on

ಮಳವಳ್ಳಿ: ಕರುನಾಡನ್ನು ಕಟ್ಟಿ ಬೆಳೆಸಲು ಹಾಗೂ ಭಾಷೆಯ ಉಳಿವಿಗಾಗಿ ಸಹಸ್ರಾರು ಮಹನೀಯರು ತ್ಯಾಗ, ಬಲಿದಾನಗಳನ್ನು ಮಾಡಿದ್ದು, ಇಲ್ಲಿ ಹುಟ್ಟಿದ ಪ್ರತಿಯೊಬ್ಬ ನಾಗರಿಕ ಮಾತೃಭಾಷೆಯನ್ನು ಹೆತ್ತ ತಾಯಿಯಂತೆ ಗೌರವಿಸಬೇಕೆಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.


ಪಟ್ಟಣದ ಸರ್ಕಾರಿ ಕ್ರಿಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆ ನೆಲ, ಜಲ ಹಾಗೂ ಭಾಷಾಭಿಮಾನವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.


ತಹಸೀಲ್ದಾರ್ ಲೋಕೇಶ್ ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ತಾಪಂ ಕಾರ್ಯನಿರ್ವಹಣಾಧಿಕಾರಿ ಮಮತಾ, ಬಿಇಒ ಚಂದ್ರಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ವೀರಭದ್ರಪ್ಪ, ಕಸಾಪ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಸದಸ್ಯರಾದ ಟಿ.ನಂದಕುಮಾರ್, ನೂರುಲ್ಲಾ, ಶಿವಸ್ವಾಮಿ, ರಾಜಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ದ್ಯಾಪೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿ ದೇವರಾಜು, ಮುಖಂಡರಾದ ದಿಲೀಪ್ ಕುಮಾರ್, ಡಾ.ಮಹದೇವು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net