ಶುಶ್ರೂಷಕಿಯರಿಗೂ ಗೌರವ ನೀಡಿ

2Anand4
Published on

ಬೆಳಗಾವಿ: ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವಲ್ಲಿ ವೈದ್ಯರಷ್ಟೇ ಶುಶ್ರೂಷಕಿಯರೂ ಪ್ರಮುಖರು. ಅವರ ಸೇವೆ ಗುರುತಿಸಿ, ಗೌರವಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ನಗರದ ಬಿಮ್ಸ್​ ಕಾಲೇಜಿನಲ್ಲಿ ಈಚೆಗೆ ಏರ್ಪಡಿಸಲಾಗಿದ್ದ ಪ್ರಸಕ್ತ ವರ್ಷದ ಬಿಎಸ್ಸಿ ನರ್ಸಿಂಗ್​ ವಿದ್ಯಾರ್ಥಿಗಳ ವೃತ್ತೀಜಿವನ ಪಾದಾರ್ಪಣೆ ಪ್ರತಿೆ ಸ್ವೀಕರಣೆ ಮತ್ತು ಪ್ಲಾರೆನ್ಸ್​ ನೈಟಿಂಗೇಲ್​ ಸ್ಮರಣಾರ್ಥ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ವೃತ್ತಿ ಜೀವನದಲ್ಲಿ ಶ್ರದ್ಧೆ, ಸಹನೆ, ಸಮಚಿತ್ತ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ರೋಗಿಗಳ ಸೇವೆ ಮಾಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ನಿರ್ದೇಶಕ ಡಾ.ಅಶೋಕ ಶೆಟ್ಟಿ ಮಾತನಾಡಿ, ಕಳೆದ 15 ವರ್ಷಗಳಿಂದ ಸಂಸ್ಥೆಯ ನರ್ಸಿಂಗ್​ ಕಾಲೇಜು ಗುಣಮಟ್ಟದ ಪ್ರಾಯೋಗಿಕ ಶಿಕ್ಷಣ ನೀಡುವುದರ ಮೂಲಕ ವೈದ್ಯಕಿಯ ೇತ್ರಕ್ಕೆ ಸಂಪನ್ಮೂಲ ಶುಶ್ರೂಷಕಿಯರನ್ನು ನೀಡಿದೆ ಎಂದು ತಿಳಿಸಿದರು.

ಸಂಸ್ಥೆಯ ಹೃದಯ ಆರೋಗ್ಯ ಸುರೆ ವಿಭಾಗದ ಹಿರಿಯ ಸಂಯೋಜಕರಾದ ರಾಜೀವ್​ ಕೃಷ್ಣಮೇತ್ರಿ ಮತ್ತು ಪ್ರಾಂಶುಪಾಲ ಡಾ.ನಾಮದೇವ ಮಾಳಗಿ ಮಾತನಾಡಿದರು. ಶಾಸಕ ಆಸ್​ೀ ಸೇಠ್​, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಆಡಳಿತಾಧಿಕಾರಿ ಸಿದ್ದು ಹುಲ್ಲೋಳಿ, ಶಿಲ್ಪಾ ವಾಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net