

ವಿಜಯಪುರ : ಡಾ. ಬಿ.ಆರ್. ಅಂಬೇಡ್ಕರ್ ನಮ್ಮ ದೇಶಕ್ಕೆ ನೀಡಿದ ಸಂವಿಧಾನವನ್ನು ನಾವೆಲ್ಲರೂ ಗೌರವಿಸುವ ಜತೆಗೆ ಅದರ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ರಾಮಕೃಷ್ಣ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ದಿಲೀಪಕುಮಾರ ಪೂಜಾರಿ ಹೇಳಿದರು.
ಇಲ್ಲಿನ ಶಾಂತವೀರ ನಗರದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನತೆ ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಮಹೇಶ್ವರಪ್ಪ ಡಿ. ಮಾತನಾಡಿ, ಅಂಬೇಡ್ಕರ್ ಅವರ ಜೀವನ, ವಿದ್ಯಾಭ್ಯಾಸ ಹಾಗೂ ಸಾಧನೆಗಳನ್ನು ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವೈಷ್ಣವಿ ಪೂಜಾರಿ ಅಂಬೇಡ್ಕರ್ ಅವರ ಬಗ್ಗೆ ಸಂಪ್ತ ಮಾಹಿತಿ ತಿಳಿಸಿದರು.
ಸಂಸ್ಥೆಯ ಸಹ ಸಂಯೋಜಕಿ ಶಿವಲೀಲಾ ಪೂಜಾರಿ, ಕಾರ್ಯದರ್ಶಿ ನೀಲಮ್ಮ ಪೂಜಾರಿ, ಮುಖ್ಯ ಗುರುಮಾತೆ ಹರಜೋತ ಕೌರ್ ವೇದಿಕೆಯಲ್ಲಿದ್ದರು. ಶಿಕಿ ಅನಿತಾ ಗಡೇರ ನಿರೂಪಿಸಿ ವಂದಿಸಿದರು.