ದೇಶ ಕಾಯುವ ಸೈನಿಕರನ್ನು ಗೌರವಿಸಿರಿ

24Rayabag1
Published on

ರಾಯಬಾಗ: ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಸೇನೆ ಶಕ್ತಿ ತೋರಿಸಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ಪಟ್ಟಣದ ಅಂಬಾಭವಾನಿ ಮಂದಿರದಿಂದ ಅಭಾಜಿ ವೃತ್ತದವರೆಗೆ ಶನಿವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ, ಭಾರತೀಯ ಮಹಿಳೆಯ ಸಿಂಧೂರ ಅಳಿಸಿದ್ದ ಪಾಕಿಸ್ತಾನ ವಿರುದ್ಧ ಭಾರತ ಸೈನ್ಯ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ. ದೇಶ ರಕ್ಷಿಸುವ ಸೈನಿಕರನ್ನು ಸದಾ ಗೌರವಿಸಬೇಕೆಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ ಪಾಟೀಲ, ಶಿವಶಂಕರ ಸ್ವಾಮೀಜಿ, ವೀರಭದ್ರ ಸ್ವಾಮೀಜಿ, ಪಪಂ ಅಧ್ಯಕ್ಷ ಅಶೋಕ ಅಂಗಡಿ, ಸತೀಶ ಅಪ್ಪಾಜಿಗೋಳ, ಪೃಥ್ವಿರಾಜ ಜಾಧವ, ಭರತೇಶ ಬನವಣೆ, ಮಹೇಶ ಭಾತೆ, ರಾಜು ದೇಶಪಾಂಡೆ, ಎಲ್.ಬಿ.ಚೌಗಲಾ, ವಿ.ಎಸ್.ಪೂಜಾರಿ, ಜಯದೀಪ ದೇಸಾಯಿ, ಶಿವಾನಂದ ಬಂತೆ, ಅಪ್ಪು ಪವಾರ, ಅನಿಲ ಶೆಟ್ಟಿ, ಸದಾಶಿವ ಘೋರ್ಪಡೆ, ರಾಜಶೇಖರ ಖನದಾಳೆ, ಅಪ್ಪಾಸಾಹೇಬ ಬ್ಯಾಕೂಡೆ, ಆನಂದ ಹೊಸಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net