ಗ್ಯಾರಂಟಿ ಯೋಜನೆಗಳ ದೂರಿಗೆ ಸ್ಪಂದಿಸಿ: ಜಿ.ಕೃಷ್ಣಪ್ಪ ಸೂಚನೆ

guarantee meet
Published on

ಬೆಂಗಳೂರು: ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ.ಕೃಷ್ಣಪ್ಪ ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಸಭೆ ನಡೆಸಿ ವಿವಿಧ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆ ನಡೆಯುತ್ತಿದ್ದು, ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಕುರಿತು ಯಾವುದೇ ದೂರುಗಳು ಬಂದಲ್ಲಿ, ಅಂತಹ ಫಲಾನುಭವಿಗಳಿಗೆ ತ್ವರಿತವಾಗಿ ಸ್ಪಂದಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಅವರು ಸ್ಥಳೀಯ ಸಮಿತಿ ಮುಖ್ಯಸ್ಥರಿಗೆ ಸೂಚಿಸಿದರು.

ಆರ್ಥಿಕವಾಗಿ ಸಬಲರಾಗಿರುವ ಮಹಿಳೆಯರು ತಾವು ಪಡೆಯುತ್ತಿರುವ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಸರ್ಕಾರಕ್ಕೆ ಸ್ವಯಂಪ್ರೇರಿತವಾಗಿ ಬಿಟ್ಟುಕೊಡಬೇಕು ಎಂದು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜಿ.ಕೃಷ್ಣಪ್ಪ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಾಸುದೇವ ರೆಡ್ಡಿ, ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಸ್ವಪ್ನಚಂದ್ರ ಶೆಟ್ಟಿ, ಸ್ಥಳೀಯ ಸಮಿತಿಯ ಸದಸ್ಯ ಕಾರ್ಯದರ್ಶಿ ಶಾಂತೇಶ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net