

ಧಾರವಾಡ: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ಗೆ ಸಂಬ೦ಧಿಸಿ ರೈತರಿಂದ ಅಹವಾಲು ಬಂದರೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೆಸ್ಕಾಂ ಅಽಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲೆಯ ವಿದ್ಯುತ್ ಸರಬರಾಜು ಸ್ಥಿತಿಗತಿ ಕುರಿತು ಹೆಸ್ಕಾಂ ಅಽಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಟ್ರಾನ್ಸ್ಫಾರ್ಮರ್‌ಗಳು ಸುಟ್ಟಾಗ ಅಽಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ರೈತರು ಸಹಾಯವಾಣಿ ಮೂಲಕ ಸಲ್ಲಿಸುವ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಟ್ರಾನ್ಸ್ಫಾರ್ಮರ್‌ಗಳು ಸುಟ್ಟರೆ ರೈತರು ತಿಳಿಸುವ ಮೊದಲೇ ಹೆಸ್ಕಾಂಗೆ ನೇರವಾಗಿ ತಿಳಿಯುವಂಥ ತಂತ್ರಜ್ಞಾನ ರೂಪಿಸಬೇಕು ಎಂದರು.
ಹೆಸ್ಕಾA ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ ರೋಶನ್ ಮಾತನಾಡಿ, ಕಳೆದೆರಡು ವರ್ಷಗಳಲ್ಲಿ ಹುಬ್ಬಳ್ಳಿ ವಿಭಾಗವು ಚೇತರಿಸಿಕೊಂಡು ಅಭಿವೃದ್ಧಿಯ ಹಾದಿಯಲ್ಲಿದೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಸಂಬAಽಸಿದ ಮುಂಜಾಗ್ರತಾ ನಿರ್ವಹಣಾ ದುರಸ್ತಿ ಕಾಮಗಾರಿಗಳನ್ನು ೮ ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸ್ಥಳೀಯ ಜನಪ್ರತಿನಿಽಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.
ಪ್ರಭಾರ ಜಿಲ್ಲಾಽಕಾರಿ ಸ್ವರೂಪ ಟಿ.ಕೆ., ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಹಾಗೂ ಹೆಸ್ಕಾಂ ಅಽಕಾರಿಗಳಿದ್ದರು.