ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಜಿಪಂ ಸಿಇಓ

raichur
raichur
Published on

 ರಾಯಚೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಜನರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ ಕೆಲಸ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ ಹೇಳಿದರು.

ನಗರದ ಜಿಪಂನ ಜಲ ನಿರ್ಮಲ ಸಭಾಂಗಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-1, ಗ್ರೇಡ್-2, ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆಯಲ್ಲಿ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದರು.

ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್-1, ಗ್ರೇಡ್-2, ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರು ಸರ್ಕಾರದ ಯೋಜನೆಗಳಿಗೆ ಸೇರಿದಂತೆ ಇನ್ನಿತರ ಯಾವುದೇ ಕೆಲಸಗಳಿಗೆ ಆಮಿಸವರೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಂಡು ಅವರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಈ ವರ್ಗಾವಣೆಯಲ್ಲಿ ಗ್ರೇಡ್-1, ಗ್ರಾಮ ಪಂಚಾಯತ ಕಾರ್ಯದರ್ಶಿಗಳು 7ಜನ , ಗ್ರೇಡ್-2, ಗ್ರಾಮ ಪಂಚಾಯತ ಕಾರ್ಯದರ್ಶಿಗಳು 9ಜನ , ದ್ವಿತೀಯ ದರ್ಜೆ ಲೆಕ್ಕ ಸಹಾಯಕರು 6 ಜನ ಸೇರಿ ಒಟ್ಟು 24 ಜನರಿಗೆ ಆದೇಶ ಪ್ರತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net