ಮತದಾರರ ಸಮಸ್ಯೆಗಳಿಗೆ ಸ್ಪಂದನೆ

BIRUR victorey
ಬೀರೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸಿದರು. ಪುರಸಭೆ ಸದಸ್ಯ ಬಿ.ಕೆ.ಶಶಿಧರ್, ಯತೀಶ್, ಸದಾಶಿವ, ಮುರ್ಗಿ ಹರ್ಷ ಇತರರಿದ್ದರು.
Published on

ಬೀರೂರು: ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದರಿಂದ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಂಗಳವಾರ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪುರಸಭೆ ಸದಸ್ಯ ಬಿ.ಕೆ.ಶಶಿಧರ್ ಮಾತನಾಡಿ, ಹಾಸನ ಕ್ಷೇತ್ರದಿಂದ ಕೈಪಡೆಯನ್ನು ಬಲಪಡಿಸುವಲ್ಲಿ ಪ್ರತಿ ಕಾರ್ಯಕರ್ತನೂ ಶ್ರಮಿಸಿದ್ದಾರೆ. ಇದು ಎಲ್ಲ ಕಾರ್ಯಕರ್ತರ ಗೆಲುವಾಗಿದೆ. ಪ್ರಬುದ್ಧ ಮತದಾರರ ಕಷ್ಟ-ಸುಖಗಳಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸಿದೆ. ಅದಕ್ಕೆ ತಕ್ಕಂತೆ ಶಾಸಕ ಕೆ.ಎಸ್.ಆನಂದ್ ಅವರ ಮಾರ್ಗದರ್ಶನ ಹಾಗೂ ಪಕ್ಷದ ಮುಖಂಡರ ಪರಿಶ್ರಮಕ್ಕೆ ಗೆಲುವಿನ ಸಿಹಿ ದೊರೆತಿದೆ ಎಂದರು.
ಕಾಂಗ್ರೆಸ್ ಮುಖಂಡರಾದ ಯತೀಶ್, ಮುರ್ಗಿ ಹರ್ಷ, ಬಿ.ಎಚ್.ಸದಾಶಿವ, ಮುಕುಂದ, ಪ್ರಭು, ಶಿವಣ್ಣ, ಡಿಶ್ ರವಿ, ಬಸವರಾಜ್, ಮೋಹನ್, ಯೋಗೀಶ್ ಹಾಗೂ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net