ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದನೆ ಅಗತ್ಯ

knd inaugration
Published on

ಕುಂದಾಪುರ: ಗ್ರಾಮೀಣ ಭಾಗದಲ್ಲಿ ಆನ್‌ಲೈನ್ ತರಗತಿ ನಡೆಸುವುದು ತುಂಬಾ ಕಷ್ಟಕರವಾಗಿದೆ. ಕರೊನಾದಿಂದಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಹನ ನಡೆಸಲು ಕಷ್ಟವಾಗುತ್ತಿದೆ. ಅದೆಷ್ಟೋ ಶಿಕ್ಷಕರು ಕೋವಿಡ್‌ನಿಂದಾಗಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಶಿಕ್ಷಕ ಮತ್ತು ವಿದ್ಯಾರ್ಥಿ ಸಮುದಾಯಗಳ ಶೈಕ್ಷಣಿಕ ಅಗತ್ಯಗಳಿಗೆ ಶೀಘ್ರ ಸ್ಪಂದಿಸಬೇಕು ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.

ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ (ಐಕ್ಯೂಎಸಿ) ಆಯೋಜಿಸಿದ ಶಿಕ್ಷಕ ಸಮುದಾಯದ ಮೇಲೆ ಕೋವಿಡ್-19 ಬೀರಿದ ಪರಿಣಾಮಗಳು ಮತ್ತು ಸವಾಲುಗಳು ಎಂಬ ವಿಷಯದ ಕುರಿತು ಆಯೋಜಿಸಿದ ರಾಷ್ಟ್ರ ಮಟ್ಟದ ವೆಬಿನಾರ್‌ನಲ್ಲಿ ಮಾತನಾಡಿದರು.

ಪ್ರಾಂಶುಪಾಲ ಪ್ರೊ.ಕೆ. ಉಮೇಶ್ ಶೆಟ್ಟಿ ವಿಚಾರಣ ಸಂಕಿರಣ ಉದ್ಘಾಟಿಸಿದರು. ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕಿ ಸ್ಫೂರ್ತಿ ಎಸ್. ಫರ್ನಾಂಡಿಸ್ ಕಾರ್ಯಕ್ರಮ ಸಂಯೋಜಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ವೀಣಾ ವಾಸುದೇವ ಭಟ್ ಸಂಪನ್ಮೂಲ ವ್ಯಕ್ತಿ ಪರಿಚಯಿಸಿದರು.

ಅರ್ಥಶಾಸ್ತ್ರ ವಿಭಾಗದ ಮುಖಸ್ಥ ಸುಧಾಕರ್ ಪಾರಂಪಳ್ಳಿ ವಂದಿಸಿದರು. ಗಣಕ ವಿಜ್ಞ್ಞಾನ ವಿಭಾಗದ ಮುಖ್ಯಸ್ಥ ಶೈಲೇಶ್ ಬಿ.ಸಿ. ತಾಂತ್ರಿಕ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು. ಸಾರ್ವಜನಿಕ ಸಂಪರ್ಕ ಅಧಿಕಾರಿ ರಕ್ಷಿತ್ ರಾವ್ ಕಾರ್ಯಕ್ರಮ ನಿರೂಪಿಸಿದರು. ವೆಬಿನಾರ್‌ನಲ್ಲಿ 100ಕ್ಕೂ ಮಿಕ್ಕಿ ಶಿಕ್ಷಕರು ದೇಶದ ಬೇರೆ ಬೇರೆ ಭಾಗಗಳಿಂದ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net