ಶಿರಸಿ: ಅರಣ್ಯ ಅತಿಕ್ರಮಣದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೆನರಾ ವೃತ್ತ ಅರಣ್ಯ ಸಂರಕ್ಷಣಾಧಿಕಾರಿಯೊಂದಿಗೆ ಅರಣ್ಯವಾಸಿಗಳ ಸಮಸ್ಯೆಗಳ ಸ್ಪಂದನ ಕಾರ್ಯಕ್ರಮವನ್ನು ಜ.9ರಂದು ಏರ್ಪಡಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಅರಣ್ಯ ಅತಿಕ್ರಮಣ ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ, ಇತ್ತೀಚಿನ ದಿನಗಳಲ್ಲಿ ಅರಣ್ಯವಾಸಿಗಳಿಗೆ ಉಂಟಾಗುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ಅಗತ್ಯತೆ ಇದೆ. ಅರಣ್ಯವಾಸಿಗಳೊಂದಿಗೆ ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಮತ್ತು ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌಜನ್ಯ, ಕಿರುಕುಳ ಕುರಿತು ಹಿರಿಯ ಅಧಿಕಾರಿಯೊಂದಿಗೆ ಸಮಾಲೋಚಿಸುವ ಉದ್ದೇಶದಿಂದ ಸಭೆ ಸಂಘಟಿಸಲು ನಿಧರ್ರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.