ನೌಕರರಿಗೆ ಭದ್ರತೆಯನ್ನು ಒದಗಿಸುವ ಜವಾಬ್ದಾರಿ ಕೆಲಸ ಮಾಡಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Ramalinga Reddy
Published on

ಬೆಂಗಳೂರು: ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.


ಹೊಸ ವರ್ಷದ ಅಂಗವಾಗಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಗೌರವಿಸಿ ಮಾತನಾಡಿದರು.


ಕೋಟಿ ರೂ. ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು ನಡೆಸಬಹುದಾಗಿದೆ. ಈ ಹಿಂದೆ ಅಪಘಾತ ಸೇರಿದಂತೆ ಇತರ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ ೩ ಲಕ್ಷ ರೂ.ಗಳನ್ನು ಮಾತ್ರ ನೀಡಲಾಗುತ್ತಿತ್ತು. ಸಾರಿಗೆ ಸುರಕ್ಷಾ ಅಪಘಾತ ವಿಮಾ ಪರಿಹಾರ ಯೋಜನೆಯಿಂದ ನಿಗಮದಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅದೇ ರೀತಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗೆ ಹೆಚ್ಚಿನ ಮೊತ್ತದ ಆರ್ಥಿಕ ಪರಿಹಾರ ಒದಗಿಸುವ ಮೂಲಕ ಅವರ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ೫೦ ಲಕ್ಷ ರೂ. (ಯುನೈಟೆಡ್ ಇಂಡಿಯಾ ಇನ್ಸುರೆನ್ಸ್) ಹಾಗೂ ಎಸ್‌ಬಿಐ ಇನ್ಸುರೆನ್ಸ್ ಅಡಿಯಲ್ಲಿ ೫೦ ಲಕ್ಷ ರೂ. ನೀಡಲಾಗುತ್ತಿದೆ. ಈ ಯೋಜನೆಗಳ ಅಡಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಒಟ್ಟು ೧ ಕೋಟಿ ಅಪಘಾತ ವಿಮಾ ಮೊತ್ತವನ್ನು ನೀಡಲಾಗುತ್ತದೆ ಎಂಂದರು.


೧೨ ಸಿಬ್ಬಂದಿಗೆ ತಲಾ ೧ ಕೋಟಿ ರೂ. ವಿತರಣೆ
ಇದೇ ವೇಳೆ ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ ೧ ಕೋಟಿ ರೂ. ಪರಿಹಾರ ವಿತರಣೆ ಮಾಡಿದರು. ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು ೧೨ ಸಿಬ್ಬಂದಿಯ ಅವಲಂಬಿತರಿಗೆ ತಲಾ ೧ ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಯಿತು. ಮೃತ ಅವಲಂಬಿತರ ಕುಟುಂಬದವರಿಗೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿದೇರ್ಶಶಕ ವಿ.ಅನ್ಬುಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net