ಕೊಡಗು ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟ

result
Published on

ಕುಶಾಲನಗರ:

ಕೊಡಗು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎರಡನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಮತ್ತು ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಸಿ.ತಾರಾನಾಥ್ ಗುರುವಾರ ಪ್ರಕಟಿಸಿದರು.

ಕೊಡಗು ವಿಶ್ವವಿದ್ಯಾಲಯ ಈ ಹಿಂದೆ ಕೂಡ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಫಲಿತಾಂಶ ಮತ್ತು ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಯುಜಿಸಿ ನಿಯಮಾನುಸಾರ ಶೀಘ್ರವಾಗಿ ಪ್ರಕಟಿಸುವ ಮೂಲಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದೆ. ಅದರಂತೆಯೇ 2023-24ನೇ ಶೈಕ್ಷಣಿಕ ಸಾಲಿನ ಎರಡನೇ ಸೆಮಿಸ್ಟರ್ ಪರೀಕ್ಷೆ ನಡೆದ ಕಡಿಮೆ ಅವಧಿಯಲ್ಲಿ ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಲಾಗಿದೆ.

ಕೊಡಗು ವಿಶ್ವವಿದ್ಯಾಲಯ ಕುಲಸಚಿವ (ಮೌಲ್ಯಮಾಪನ) ಪ್ರೊ. ಸುರೇಶ್ ಎಂ., ಮಡಿಕೇರಿ ಎಫ್‌ಕೆಎಂಸಿ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಘವ, ಸಿಂಡಿಕೇಟ್ ಸದಸ್ಯರುಗಳಾದ ಡಾ. ಸರಸ್ವತಿ, ಡಾ. ದಯಾನಂದ್, ಪ್ರಾಧ್ಯಾಪಕರುಗಳಾದ ಡಾ. ಕಾವೇರಿ, ಪ್ರೊ. ತಿಪ್ಪೇಸ್ವಾಮಿ, ಡಾ. ಪ್ರದೀಪ್ ಆರ್. ಭಂಡಾರಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಸಂಯೋಜಕ ಪ್ರೊ. ರವಿಶಂಕರ್, ಯುಯುಸಿಎಂಎಸ್ ನೋಡಲ್ ಅಧಿಕಾರಿ ಗಗನ್ ಎಚ್.ಎಸ್ ಮೊದಲಾದವರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net