ಕೊಡಗು ವಿವಿ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಫಲಿತಾಂಶ ಪ್ರಕಟ

result
Published on

ಕುಶಾಲನಗರ:

ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ. ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲೆಯ ಮತ್ತು ಹೊರಗಿನ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬAಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUಅಒS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ ಏUಏ.ಏಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ. ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಆನ್ಲೈನ್ ತಂತ್ರಾAಶದಲ್ಲಿ ಅಧಿಕೃತವಾಗಿ ಪ್ರಕಟಿಸಿದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ. ಎಂ. ಸುರೇಶ್, ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ. ಎಂ. ಎನ್.ರವಿಶಂಕರ್ ನೋಡಲ್ ಅಧಿಕಾರಿ ಎಚ್. ಎಸ್. ಗಗನ್ ಹಾಗೂ ಬೋಧಕರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net