ರಾಜ್ಯದ ನಿವೃತ್ತ ಜಂಟಿ ಮುಖ್ಯ ಚುನಾವಣಾಧಿಕಾರಿ ನೊಣವಿನಕೆರೆ ಕ್ಷೇತ್ರಪಾಲ್ ನಿಧನ

Nonavinakere
Published on

ಬೆಂಗಳೂರು: ನಿವೃತ್ತ ಜಂಟಿ ಮುಖ್ಯ ಚುನಾವಣಾಧಿಕಾರಿ ನೊಣವಿನಕೆರೆ ಕ್ಷೇತ್ರಪಾಲ್ ಅವರು ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ತಿಪಟೂರು ತಾಲೂಕಿನ ನೊಣವಿನಕೆರೆಯವರಾದ ಅವರು ಮೂಲತಃ ಸಚಿವಾಲಯ ಅಧಿಕಾರಿಯಾಗಿದ್ದರು. ಸರ್ಕಾರದಲ್ಲಿ ಸೇವಾ ನಿಯಮಗಳ ಬಗ್ಗೆ ನಿಖರವಾಗಿ ಮಾತನಾಡುತ್ತಿದ್ದ ಅವರು ಅನೇಕ ಸಮಸ್ಯೆಗಳಿಗೂ ಪರಿಹಾರ ಕಂಡು ಹಿಡಿದಿದ್ದರು. ಸೇವಾ ನಿಯಮಗಳಿಗೆ ಸಂಬಂಧಿಸಿದಂತೆ ನಾಲ್ಕು ಪುಸ್ತಕಗಳನ್ನು ಬರೆದಿದ್ದರು.

ಸಚಿವಾಲಯ ತರಬೇತಿ ಸಂಸ್ಥೆಯ ನಿರ್ದೇಶಕರಾಗಿದ್ದ ಅವರು, ಸಚಿವಾಲಯ ನೌಕರರ ಸಂಘದ ಪದಾಧಿಕಾರಿಯೂ ಆಗಿ ಕೆಲ ಸಮಯ ಸೇವೆ ಸಲ್ಲಿಸಿದ್ದರು. ಪ್ರಾಮಾಣಿಕ ಅಧಿಕಾರಿಯಾಗಿದ್ದರು. ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿಯಾಗಿ ಅನೇಕ ಚುನಾವಣೆಗಳನ್ನು ನಡೆಸಿದ್ದರು. ಮೂರು ವರ್ಷದ ಹಿಂದೆ ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ವಯೋಸಹಜ ಕಾರಣಗಳಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net