ನಿವೃತ್ತ ಮೇಲ್ವಿಚಾರಕನಿಂದ 2.22 ಲಕ್ಷ ರೂ. ನೆರವು

10
Published on

ಬೆಳಗಾವಿ: ಮಹಾಮಾರಿ ಕರೊನಾ ವೈರಸ್ ವಿರುದ್ಧ ಹಗಲಿರುಳು ಹೋರಾಡುತ್ತಿರುವವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಮೇಲ್ವಿಚಾರಕ ಶಿವನಪ್ಪ ಬಿ. ಖಣಗಣ್ಣಿ ಅವರು 2.22 ಲಕ್ಷ ರೂಪಾಯಿ ನೆರವು ನೀಡಿದ್ದಾರೆ.

ಪಿಎಂ-ಕೇರ್ಸ್‌ಗೆ 1,11,000 ರೂ. ಹಾಗೂ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ 1,11,000 ರೂ.ಗಳಂತೆ ಒಟ್ಟು 2.22 ಲಕ್ಷ ರೂ.ಗಳ ಚೆಕ್‌ಅನ್ನು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಮಂಗಳವಾರ ಸಲ್ಲಿಸಿದರು. ಅಲ್ಲದೆ, ಕರೊನಾ ಸೋಂಕು ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ವಿಶೇಷ 200 ಸಂರಕ್ಷಣೆ ಕಿಟ್ ನೀಡುವ ಮೂಲಕ ಶಿವನಪ್ಪ ನಿವೃತ್ತ ಅಧಿಕಾರಿಗಳಿಗೆ ಮಾದರಿಯಾದರು.

ಈ ಹಿಂದೆ ಶಿವನಪ್ಪ ಖಣಗಣ್ಣಿ ಅವರು ಬೆಳಗಾವಿ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆ, ರಾಜ್ಯ ಮಟ್ಟದ ಓಟ, ಅಥ್ಲೆಟಿಕ್ ಹಾಗೂ ಕುಸ್ತಿ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಕೀರ್ತಿ ತಂದಿದ್ದಾರೆ. ಇದೀಗ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವಿಭಾಗೀಯ ಸಹ ನಿರ್ದೇಶಕ ಡಾ.ಅಪ್ಪಾಸಾಹೇಬ ನರಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ವಿ. ಮುನ್ಯಾಳ ಹಾಗೂ ಸಹಾಯಕ ಆಡಳಿತ ಅಧಿಕಾರಿ ರಮೇಶ ಮಡಿವಾಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net