ನನ್ನ ಸಾವಿಗೆ ನಾನೇ ಕಾರಣ; ಬರೆದಿಟ್ಟು ನೇಣಿಗೆ ಶರಣಾದರು ನಿವೃತ್ತ ಪ್ರೊಫೆಸರ್

Untitled-1
Published on

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್​ ಅಶೋಕ್​ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಸಿಲ್ಕ್​ ಬೋರ್ಡ್ ಬಳಿ ಇರುವ ತಮ್ಮ ಮನೆಯಲ್ಲಿ ಅಶೋಕ್​ ಕುಮಾರ್​ ನೇಣು ಹಾಕಿಕೊಂಡಿದ್ದು, ಮೈಕೋ ಲೇಔಟ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅವರು 'ನನ್ನ ಸಾವಿಗೆ ನಾನೇ ಕಾರಣ' ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net