ಕುಟ್ರುಪಾಡಿಯಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

IMG-20220815-WA0023
Published on

ಕಡಬ: ಇಲ್ಲಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ಸೋಮವಾರ ಧ್ವಜಾರೋಹಣ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಗಂಗಾಧರ ಗೌಡ ಮೃತಪಟ್ಟವರು. ಹೊಸಮಠ ಸಿ.ಎ.ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎನ್.ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡುತ್ತಿದ್ದರು. ಧ್ವಜಾರೋಹಣ ನಡೆಸುವ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ದಾರಿ ಮದ್ಯ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net