ಪುನರ್ಮಿಲನ ಸಮಾರಂಭ ಇಂದು

9 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಜನತಾ ಶಿಕ್ಷಣ ಸಮಿತಿಯ ಕಾಲೇಜಿನ ಹಳೇ ವಿದ್ಯಾರ್ಥಿಗಳ ಪುನರ್ಮಿಲನ ಸಮಾರಂಭವನ್ನು ಮೇ 10ರಂದು ಜೆಎಸ್​ಎಸ್​ನ ಸನ್ನಿಧಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪುನರ್ಮಿಲನ ಸಮಿತಿ ಅಧ್ಯಕ್ಷ ನರಸಿಂಹ ರಾವ್​ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದೆ. ಕಾನೂನು ಸಚಿವ ಎಚ್​.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ, ನಟ ಅನಿರುದ್ಧ ಜತ್ಕರ್​ ಆಗಮಿಸಲಿದ್ದಾರೆ. ಜೆಎಸ್​ಎಸ್​ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಕಾಲೇಜಿನ ವಿಜ್ಞಾನ, ಕಲೆ ಹಾಗೂ ವಾಣಿಜ್ಯ ವಿಭಾಗದ 30 ಶಿಕ್ಷಕರಿಗೆ ಸನ್ಮಾನಿಸಿ ಗುರು ವಂದನೆ ಸಲ್ಲಿಸಲಾಗುವುದು. ಇದೇ ಸಮಯದಲ್ಲಿ ನಮ್ಮನ್ನು ಅಗಲಿದ ಗುರುಗಳು ಹಾಗೂ ಗೆಳೆಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕ್ಯಾಂಪಸ್​ ರೌಂಡ್​ ಜತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಸಮಿತಿ ಕಾರ್ಯದರ್ಶಿ ಶ್ಯಾಮ ಮಲ್ಲನಗೌಡರ ಮಾತನಾಡಿ, ಕಾಲೇಜಿನಲ್ಲಿ ಕಲಿತು ಹೊರ ರಾಜ್ಯ, ವಿದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಸೇರಿ ಸುಮಾರು ಸಾವಿರ ವಿದ್ಯಾರ್ಥಿಗಳು ಆಗಮಿಸಲಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಳೇ ವಿದ್ಯಾರ್ಥಿಗಳನ್ನು ಸೇರಿ ಕಾರ್ಯಕ್ರಮ ಆಯೋಜಿಸಿರುವುದು ಜೆಎಸ್​ಎಸ್​ನಲ್ಲಿ ಇದೇ ಪ್ರಥಮವಾಗಿದೆ. ಮುಂದಿನ ದಿನಗಳಲ್ಲಿ ಇನಷ್ಟು ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದೆ ಎಂದರು.

ಸದಸ್ಯರಾದ ರವಿಕುಮಾರ ಕಗ್ಗಣ್ಣವರ, ಅರವಿಂದ ಜಮಖಂಡಿ, ವಿಜಯ ಇನಾಮದಾರ, ರವಿ ಬಾಂಡಗೆ, ಜಿತೇಂದ್ರ ನಾಡಗೇರ, ಸಂದೀಪ ಚಿಲಕವಾಡ, ಮಹಾವೀರ ಉಪಾಧ್ಯೆ, ಭಾರತಿ ಆರ್​.ಕೆ., ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net