ಪಡಿತರ ಆಹಾರ ಧಾನ್ಯ ವಿತರಣೆ

rvt-15-2
Published on

ರೇವತಗಾಂವ: ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಶನಿವಾರ ಪಡಿತರ ಧಾನ್ಯ ವಿತರಿಸಲಾಯಿತು.

ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಉಚಿತ 35 ಕೆಜಿ ಜತೆಗೆ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿದ ಪ್ರತಿ ಸದಸ್ಯರಿಗೆ ಉಚಿತ 10 ಕೆಜಿ ಅಕ್ಕಿ, ಪ್ರತಿ ಕುಟುಂಬಕ್ಕೆ 2 ಕೆಜಿ ಗೋಧಿ ವಿತರಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ಗ್ರಾಹಕರ ಮತ್ತು ಆಹಾರ ನಾಗರಿಕ ಸರಬರಾಜು ಮಂತ್ರಾಲಯದ ಆದೇಶದನ್ವಯ ಕಡ್ಡಾಯವಾಗಿ ಒಟಿಪಿ ಮೂಲಕ ಪಡಿತರ ಚೀಟಿದಾರರು ನೋಂದಾಯಿತ ಮೊಬೈಲ್‌ನ್ನು ನ್ಯಾಯಬೆಲೆ ಅಂಗಡಿಯವರಿಗೆ ತೋರಿಸಿ ಪರಸ್ಪರ ಅಂತರ ಹಾಗೂ ಮಾಸ್ಕ್ ಧರಿಸಿಕೊಂಡು ಪಡಿತರ ಧಾನ್ಯ ಪಡೆದರು. ಪಿಕೆಪಿಎಸ್ ಕಾರ್ಯದರ್ಶಿ ಸುನೀಲ ಕೋಳಿ ಹಾಗೂ ಸಂತೋಷ ಕುಂಬಾರ, ಕಲ್ಲಪ್ಪ ಹೂಗಾರ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net