ಸಿದ್ದರಾಮಯ್ಯ ಪದಚ್ಯುತಿಗೆ ಬಿಜೆಪಿ ಹುನ್ನಾರ : ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಕ್ರೋಶ

lakshman (2)
Published on

ಮೈಸೂರು: ಶ್ರೇಷ್ಠ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪದಚ್ಯುತಿ ಮಾಡುವ ಹುನ್ನಾರವನ್ನು ಬಿಜೆಪಿ ನಡೆಸುತ್ತಿದೆ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಬಿಜೆಪಿಯವರ ಹಣೆಯಲ್ಲೇ ಬರೆದಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.

ಏನೂ ಇಲ್ಲದೆ ಇರುವ ಸಂಗತಿಯನ್ನು ಬಿಜೆಪಿಯವರು ಹೈಕೋರ್ಟ್‌ವರೆಗೆ ತೆಗೆದುಕೊಡು ಹೋದರು. ಮುಂದಿನ ದಿನಗಳಲ್ಲಿ ಯಾವ ರೀತಿ ಕಾನೂನಿನ ಹೋರಾಟ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಲಾಗುವುದುಉ. ರಾಜ್ಯಪಾಲರು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ. ನಮ್ಮ ರಾಜ್ಯದ ಮಾನವನ್ನು ರಾಷ್ಟ್ರ ಮಟ್ಟದಲ್ಲಿ ಹರಾಜು ಹಾಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರವನ್ನು ಪಥನಗೊಳಿಸುವುದು ಬಿಜೆಪಿಯ ಚಾಳಿಯಾಗಿದೆ. ಕಳೆದ 10 ವರ್ಷಗಳಲ್ಲಿ 410ಕ್ಕೂ ಹೆಚ್ಚು ಜನಪ್ರತಿನಿಧಿಗಳನ್ನು ಆಪರೇಷನ್ ಕಮಲ ಮಾಡಿದ್ದಾರೆ. ರಾಜ್ಯ ಸರ್ಕಾರವನ್ನು ಪಥನಗೊಳಿಸಲು ಬಿಜೆಪಿಯವರು ರಾಜ್ಯಪಾಲರನ್ನು ಬಳಕೆ ಮಾಡಿಕೊಂಡಿದ್ದು, ಕೂಡಲೇ ಅವರನ್ನು ಕೇಂದ್ರ ಸರ್ಕಾರ ವಾಪಾಸ್ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ದೃತಿಗೆಡುವ ಅವಶ್ಯಕತೆ ಇಲ್ಲ. ಸದ್ಯಕ್ಕೆ ಹಿನ್ನೆಡೆಯಾಗಿದ್ದರೂ ಮುಂದೆ ನಮಗೆ ನ್ಯಾಯ ದೊರೆಯಲಿದೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net